ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಸಮಿಕ್ಷಾ ವರದಿ ನಿರ್ಣಯ ಮುಂದೂಡಿಕೆ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ.
ದಿನಾಂಕ: 29.02.2024 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ 2024 ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು.
ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಗಿತ್ತು. ದತ್ತಾಂಶ ಹಾಗೂ ಅಧ್ಯಯನ ವರದಿ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲು ಸಚಿವ ಸಂಪುಟದ ಮುಂದೆ ಮಂಡಿಸಲಾಗಿತ್ತು ಈ ವಿಷಯವನ್ನು ಮುಂದಿನ ಸಂಪುಟ ಸಭೆಗೆ ಮುಂದೂಡಲಾಯಿತು.