ಧಾರವಾಡ: ಕಾಂಗ್ರೆಸ್ ಹೈಕಮಾಂಡ್ ಎರಡೂವರೆ ವರ್ಷಕ್ಕೆ ಸಂಪುಟ ವಿಸ್ತರಣೆ ಮಾಡುವಂತೆ ಸೂಚನೆ ನೀಡಿರುವುದಾಗಿ ಕಿತ್ತೂರು ಉತ್ಸವದಲ್ಲಿ ನನಗೆ ಸಿಎಂ ತಿಳಿಸಿದ್ದಾಗಿ ಶಾಸಕ ಎನ್ ಹೆಚ್ ಕೋನರೆಡ್ಡಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ ಎಂಬುದಾಗಿ ತಿಳಿದು ಬಂದಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಪದೇ ಪದೇ ಇದನ್ನು ಹೇಳುವುದು ಸರಿಯಲ್ಲ. ಶಾಸಕರ ಕೆಲಸದ ವಿವರ ಪಡೆದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದೆ. ಅಲ್ಲದೇ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರವಾಗಿಯೂ ಶಾಸಕರು ಏನು ಮಾತನಾಡಬಾರದೆಂದು ಹೈಕಮಾಂಡ್ ಸೂಚಿಸಿದೆ ಎಂದರು.
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಉಳಿಸಿಕೊಂಡು ಸಂಪುಟ ವಿಸ್ತರಣೆಯ ವೇಳೆ ಬದಲಾವಣೆ ಮಾಡಬೇಕು. ಕೃಷ್ಣಬೈರೇಗೌಡ ಅವರು ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಉತ್ತಮ ಕೆಲಸ ಮಾಡಿದ್ದಾರೆ. ಈಗ ಕಂದಾಯ ಸಚಿವರಾಗಿಯೂ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಉಳಿಸಿಕೊಂಡು ಬದಲಾವಣೆ ಮಾಡುವುದು, ಬಿಡುವುದು ಸಿಎಂ, ಡಿಸಿಎಂಗೆ ಬಿಟ್ಟ ವಿಚಾರವಾಗಿದೆ ಎಂದರು.
BIG NEWS : ಅಕ್ರಮವಾಗಿ `BPL’ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರದಿಂದ ಬಿಗ್ ಶಾಕ್.!








