ಹುಬ್ಬಳ್ಳಿ: ಮೇನಲ್ಲಿ ರಾಜ್ಯಸಚಿವ ಸಂಪುಟ ಸಭೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ವೇಳೆಯಲ್ಲಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಅಂತ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿದಾಗರೊಂದಿಗೆ ಮಾತನಾಡಿದಂತ ಅವರು ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಶೀಘ್ರವೇ ಉಚ್ಚಾಚಿಸುವ ಮಾಹಿತಿ ಇದೆ ಎಂದರು.
ಹೆಬ್ಬಾರ್ ಹಾಗೂ ಸೋಮಶೇಖರ್ ನಮ್ಮ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಜೊತೆಗೆ ಈಚೆಗೆ ಮುಖ್ಯಮಂತ್ರಿಗಳು ಮಂಡಿಸಿದಂತ ಬಜೆಟ್ ಅನ್ನು ಸ್ವಾಗತಿಸಿದ್ದಾರೆ. ಅವರು ಯಾವಾಗಲೋ ನಮ್ಮ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದರು.
ಕೆಲವು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರಲು ಉತ್ಸುಕರಾಗಿದ್ದಾರೆ. ಅವರು ಸೂಕ್ತ ಸಮಯದಲ್ಲಿ ಪಕ್ಷದ ವರಿಷ್ಠರೊಂದಿಗೆ ಮಾತನಾಡಿ, ಸೇರ್ಪಡೆಗೊಳ್ಳಲಿದ್ದಾರೆ ಎಂದರು.
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!