ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಸುರಂಗ ಮಾರ್ಗವನ್ನು ನಿರ್ಮಿಸುವಂತ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, 250 ಅಡಿ ಸ್ಕೈಡೆಕ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 500 ಕೋಟಿ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಎಲ್ ಇಡಿ ದೀಪಗಳ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. 684 ಕೋಟಿ ವೆಚ್ಚಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ಟನಲ್ ರಸ್ತೆ ನಿರ್ಮಾಣಕ್ಕೆ ಸಮ್ಮತಿ ನೀಡಲಾಗಿದೆ. ಎಸ್ಟೀಮ್ ಮಾಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ನಿರ್ಮಾಣವಾಗಲಿದೆ. ಇದನ್ನು 12690 ಕೋಟಿ ವೆಚ್ಚದಲ್ಲಿ ಸುರಂಗ ನಿರ್ಮಾಣ ಮಾಡಲಾಗುತ್ತಿದೆ ಎಂದರು.
BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ: BJP MLC ಛಲವಾದಿ ನಾರಾಯಣಸ್ವಾಮಿ