ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಒಪ್ಪಿಕೊಂಡಿದೆ. “SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.
BIGG NEWS: ಸಿಲಿಕಾನ್ ಸಿಟಿಯಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ; ಬ್ಯಾಟರಾಯನಪುರ ಠಾಣೆಯಲ್ಲಿ ಪೋಷಕರ ದೂರು
ಶುಕ್ರವಾರ ನಡೆದಿದ್ದ ಸಭೆ: ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಕೂಡ ಎಲ್ಲಾ ನಾಯಕರುಗಳು ಮೀಸಲಾತಿ ಹೆಚ್ಚಳದ ಪರ ಒಗ್ಗಟ್ಟಿನಿಂದ ಸರ್ಕಾರಕ್ಕೆ ಮನವಿ ಮಾಡಿದ್ದವು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು, ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸುದಿರ್ಘವಾದಸಾಧಕ ಬಾದಕ ಸಾ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮವಾದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಳಿಗೆ ಮಾಹಿತಿ ನೀಡಿದ ಕಾನೂನ ಸಚಿವ ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರ ಕೂಡಲೇ ಆದೇಶ ಮೂಲಕ ಜಾರಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
BIGG NEWS : `SC-ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಸಿಎಂ ಕೈಗೊಂಡ ನಿರ್ಧಾರಕ್ಕೆ ಅಭಿನಂದನೆ : ಸಚಿವ ಕೆ.ಸುಧಾಕರ್