ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯಗೊಂಡಿದೆ. ಈ ಸಬೆಯಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಹಾಗೂ ಐದು ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆಸಲಾಯಿತು.
BREAKING NEWS: ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್; ಜಿಲ್ಲೆಯಲ್ಲೂ ಹೆಚ್ಚಿದ BF.7 ಆತಂಕ
ನಂತರ ಮಾತನಾಡಿದ ಅವರು, ಯಾವ ವಿಚಾರದ ಚರ್ಚೆಗೂ ನಾವು ಸಿದ್ಧ, ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗಿಯಾಗುತ್ತಾರೆ. ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗುತ್ತದೆ ಎಂದರು.
ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು. ಯಾವುದೇ ವಿಚಾರಗಳ ಮೇಲೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಮಧ್ಯಾಹ್ನ ದೆಹಲಿಗೆ ತೆರಳಿ ಎಲ್ಲದರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.