ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗಧಿಯಾಗಿತ್ತು. ಆದ್ರೇ ಸಚಿವ ಸಂಪುಟದ ( Karnataka Cabinet Meeting ) ಸಹೋದ್ಯೋಗಿ ಉಮೇಶ್ ಕತ್ತಿ ನಿಧನ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.
BIG NEWS: ಮೈಸೂರಿನ ‘ಬಿಜೆಪಿ ಮುಖಂಡನ ಹನಿಟ್ರ್ಯಾಫ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್: ಅಸಲಿಗೆ ನಡೆದಿದ್ದೇನು ಗೊತ್ತಾ.?
ಸಚಿವ ಉಮೇಶ್ ಕತ್ತಿ ( Minister Umesh Katti ) ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ನಿನ್ನೆ ಸ್ವಗ್ರಾಮದಲ್ಲಿ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಬೇಕಿದ್ದಂತ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.