ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಸನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ ನಿನ್ನೆ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟವನ್ನು ರಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಇದೀಗ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪುನಾರಚನೆ ಬದಲಾಗಿ ಈ ನಾಲ್ಕು ಅಂಶಗಳ ಕುರಿತು ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ.
ಹೌದು ರಾಜ್ಯ ಸಚಿವ ಸಂಪುಟ ಪುನ ರಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪುಟ ಪುನಾರಚನೆ ಬದಲಾಗಿ ನಾಲ್ಕು ಪ್ರಮುಖ ಸ್ಥಾನಗಳ ಬಗ್ಗೆ ಚರ್ಚೆ ನಡೆಸಲಾಗುತ್ತೆ. ಶಾಸಕ ಬಿ ನಾಗೇಂದ್ರ ಹಾಗೂ ರಾಜಣ್ಣ ಅವರಿಂದ ಖಾಲಿ ಆದ ಸ್ಥಾನ ತುಂಬಲು ನಿರ್ಧರಿಸಲಾಗಿದ್ದು, ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಕ್ಕಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ.
ಇನ್ನೊಂದು ಕಡೆಗೆ ಹೊಸಬರಿಗೆ ಅವಕಾಶ ನೀಡುವ ಹಿನ್ನೆಲೆ ದೊಡ್ಡ ಪ್ರಮಾಣದಲ್ಲಿ ಸಂಪುಟ ಪುನಾರಚನೆಗೆ ಹೈಕಮಾಂಡ್ ನಾಯಕರು ಒಬ್ಬರು ಸಲಹೆ ನೀಡಿದ್ದಾರೆ ಹಾಲಿ ಸಚಿವರಿಗೆ ಪಕ್ಷದ ಕೆಲಸ ನೀಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ , ಸೂಚನೆ ನೀಡಿದ್ದಾರೆ ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿ ಕಾಂಗ್ರೆಸ್ ಹೈಕಮಾಂಡ್ ಇಟ್ಟಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ನಾಳೆ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಕೆಸಿ ವೇಣುಗೋಪಾಲ್ ನವೆಂಬರ್ 18ರಂದು ದೆಹಲಿಗೆ ಆಗಮಿಸಲಿದ್ದಾರೆ. ವೇಣುಗೋಪಾಲ್ ಜೊತೆಗೆ ಚರ್ಚಿಸಿದ ಬಳಿಕ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ. ನಾಳಿನ ಸಭೆಯಲ್ಲಿ ಸಚಿವ ಸಂಪುಟದ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ.








