ಬೆಂಗಳೂರು: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದಂತ ಪೋಟೋ ವೈರಲ್ ಆಗುತ್ತಿದ್ದಂತೆ ಹಲವು ಅಧಿಕಾರಿ, ಸಿಬ್ಬಂದಿಗಳನ್ನು ಅಮಾತನಗೊಳಿಸಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಕಾರಾಗೃಹ ಡಿಜಿಪಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕೇಸಲ್ಲಿ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಲೆದಂಡವಾಗುವ ಸಾಧ್ಯತೆ ಇದೆ. ಕಾರಣ, ಘಟನೆ ಸಂಬಂಧ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗಳು ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ಜಾರಿಗೊಳಿಸಿರುವಂತ ಶೋಕಾಸ್ ನೋಟಿಸ್ ನಲ್ಲಿ ಕಾರಾಗೃಹದಲ್ಲಿ ನಡೆಯುತ್ತಿರುವಂತ ಈ ಅಕ್ರಮ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ. ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು. ವಿವರವಾದ ಉತ್ತರ ನೀಡುವಂತೆ ಡಿಜಿಪಿಗೆ ಶೋಕಾಸ್ ನೋಟಿಸ್ ನಲ್ಲಿ ತಿಳಿಸಲಾಗಿದೆ.
ಜೈಲಿನಲ್ಲಿ ಅಕ್ರಮ ತಡೆಗಾಗಿ ಕೈಗೊಂಡ ಕ್ರಮಗಳೇನು.? ಜೈಲಿನಲ್ಲಿ ನಡೆಯುತ್ತಿರುವಂತ ಅಕ್ರಮಗಳು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈ ಕುರಿತಂತೆ ವಿವರವಾದಂತ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ನಲ್ಲಿ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ತಾಕೀತು ಮಾಡಲಾಗಿದೆ. ಹೀಗಾಗಿ ಅವರ ಉತ್ತರ ಆಧರಿಸಿ, ಕಾರಾಗೃಹ ಡಿಜಿಪಿಯ ವಿರುದ್ಧ ರಾಜ್ಯ ಸರ್ಕಾರದಿಂದ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
BREAKING: ವಿವಿಧ ರಾಜ್ಯಗಳಿಗೆ ನೂತನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ನೇಮಿಸಿ ‘AICC’ ಆದೇಶ
ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ಸೆ.14ರವರೆಗೆ ಶೇ.5ರ ರಿಯಾಯಿತಿ ವಿಸ್ತರಣೆ
ಬ್ಯಾಂಕ್ ಗ್ರಾಹಕರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ!Bank Holidays