ಬೀದರ್: ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ವರದಿಯಾಗಿತ್ತು. ಈಗಾಗಲೇ ಶಿವಮೊಗ್ಗದಲ್ಲಿ ನಡೆದಿದ್ದಂತ ಘಟನೆ ಸಂಬಂಧ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಲಾಗಿದೆ.
ಈ ಸಂಬಂಧ ಸ್ವಯಂ ಪ್ರೇರಿತವಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ಸಂಬಂಧ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸಲಿದೆ.
ಮತ್ತೊಂದೆಡೆ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಿದ್ದಾರೆ. ಘಟನೆ ಸಂಬಂಧ ಸಂಪೂರ್ಣ ವರದಿಯನ್ನು ಬೀದರ್ ಜಿಲ್ಲಾಧಿಕಾರಿಗಳು KEAಗೆ ಸಲ್ಲಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತಿ ವೇಗವಾಗಿ 200 ಸಿಕ್ಸರ್ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ರಾಹುಲ್ ಪಾತ್ರ | KL Rahul
Online Scam: ನಕಲಿ ವೆಬ್ಸೈಟ್ ಲಿಂಕ್ ಗಳ ಬಗ್ಗೆ ಜಾಗರೂಕರಾಗಿರಲು ಪ್ರವಾಸಿಗರಿಗೆ ಕೇಂದ್ರ ಸರ್ಕಾರ ಸೂಚನೆ