Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿಗಳೇ ಎಚ್ಚರ : ಮನೆಯಿಂದಲೇ ಕೆಲಸ ಕೊಡುತ್ತೇವೆಂದು ₹10 ಕೋಟಿ ದೋಚಿದ ಖತರ್ನಾಕ್ ದಂಪತಿ.!

BREAKING : ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್ | Bengaluru Traffic

​ಯುವ ಭಾರತೀಯರಲ್ಲಿ ಹೆಚ್ಚುತ್ತಿದೆ ಸದ್ದಿಲ್ಲದ ಆಪತ್ತು: ದೇಶದ ಶೇ. 50 ರಷ್ಟು ಯುವಕರಲ್ಲಿ ‘ಫ್ಯಾಟಿ ಲಿವರ್’ ಸಮಸ್ಯೆ: ಅಧ್ಯಯನದಿಂದ ಆಘಾತಕಾರಿ ಸತ್ಯ ಬಹಿರಂಗ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಿಎಂ ಸಿದ್ಧರಾಮಯ್ಯಗೆ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ ಸಲ್ಲಿಕೆ
KARNATAKA

BIG NEWS: ಸಿಎಂ ಸಿದ್ಧರಾಮಯ್ಯಗೆ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ ಸಲ್ಲಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ ಹಾಗೂ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1 ರಿಂದ 18ರವರೆಗಿನ ಉಪ ಸೀಳು ಕಾಲುವೆಗಳ ಅಧುನೀಕರಣ ಅಂದಾಜು ಪಟ್ಟಿಯ ತನಿಖಾ ವರದಿಯನ್ನು ಸಲ್ಲಿಕೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಿಎಂ ಕಚೇರಿಯು, ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ವಿಚಾರಣಾ ಆಯೋಗವು ದಿನಾಂಕ: 12.03.2025 ರಂದು ಈ ಕೆಳಕಂಡಂತೆ ಎರಡು ಪ್ರತ್ಯೇಕ ತನಿಖಾ ವರದಿಗಳನ್ನು ಸಲ್ಲಿಸಿದೆ ಎಂದಿದೆ.

1) ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ
2) ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಗಳ ಆಧುನೀಕರಣ ಅಂದಾಜು ಪಟ್ಟಿ – ತನಿಖಾ ವರದಿ

ಮೇಲಿನ ಕ್ರಮಸಂಖ್ಯೆ (1)ರ ತನಿಖಾ ವರದಿಯಲ್ಲಿ:

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇಕಡ 40 ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಇದಲ್ಲದೆ ಪ್ಯಾಕೇಜ್ ಪದ್ಧತಿ ಕೈಬಿಡುವುದು, ಎಸ್.ಆರ್. ದರಪಟ್ಟಿ ನಿಗದಿ, ಸ್ಟಾರ್ ರೇಟ್ ಪದ್ಧತಿಯ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆ.ಆರ್.ಐ.ಡಿ.ಎಲ್. ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು.. ಈ ಸಂಬಂಧ ವಿಚಾರಣಾ ಆಯೋಗವು ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ಮಾಡಿ ತನಿಖೆ ನಡೆಸಿ ಪ್ರಸ್ತುತ ವರದಿಯನ್ನು ಸಲ್ಲಿಸಿದೆ.

ಇದೊಂದು ಸಾರ್ವಜನಿಕ ಕಾಮಗಾರಿಗಳಿಗೆ ಸಂಬಂಧಿಸಿದ ಆರೋಪವಾಗಿರುವುದರಿಂದ ಸಾರ್ವಜನಿಕರ ಹೇಳಿಕೆಗಳು ಮತ್ತು ವಿವರಗಳು ಬಹು ಮುಖ್ಯ ಎಂಬುದನ್ನು ಮನಗಂಡು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗವು ಕೂಲಂಕಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಲಾಗಿದೆ.

ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರವು ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ ದಿನಾಂಕ:26.07.2019 ರಿಂದ 31.03.2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿಯನ್ನು ನೀಡಬೇಕೆಂದು ತಿಳಿಸಿತು. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ.

ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿರುತ್ತದೆ.

• ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಇಪ್ಪತ್ತು ಸಾವಿರ ಪುಟಗಳನ್ನು ಹೊಂದಿದೆ.

ಮೇಲಿನ ಕ್ರಮಸಂಖ್ಯೆ (2)ರ ತನಿಖಾ ವರದಿಯಲ್ಲಿ:

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನತೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿವೃತ್ತ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಸಿದ್ದಗಂಗಪ್ಪರವರ ಅಧ್ಯಕ್ಷತೆಯಲ್ಲಿ ರಚಿಸಿದ ತಾಂತ್ರಿಕ ತಜ್ಞರ ಸಮಿತಿಯನ್ನು ವಿಸರ್ಜಿಸಿ ವಿಚಾರಣಾ ಆಯೋಗಕ್ಕೆ ಹೆಚ್ಚುವರಿಯಾಗಿ ವಹಿಸಿರುವ ತನಿಖೆಯನ್ನು ಆಯೋಗವು ನಡೆಸಿ ತನಿಖಾ ವರದಿಯನ್ನು ಸಲ್ಲಿಸಿದೆ.

• ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಸಾವಿರದ ಎಂಟುನೂರು ಪುಟಗಳನ್ನು ಹೊಂದಿದೆ.

ಶೀಘ್ರದಲ್ಲೇ ಬೆಂಬಲ ಬೆಲೆ ಯೋಜನೆಯಲ್ಲಿ ‘ಕುಸುಬಿ’ ಖರೀದಿಗೆ ನೋಂದಣಿ ಆರಂಭ: ಸಚಿವ ಶಿವಾನಂದ ಪಾಟೀಲ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :ರೈಲ್ವೆಯಲ್ಲಿ 1,003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Jobs Alert

Share. Facebook Twitter LinkedIn WhatsApp Email

Related Posts

ನಿರುದ್ಯೋಗಿಗಳೇ ಎಚ್ಚರ : ಮನೆಯಿಂದಲೇ ಕೆಲಸ ಕೊಡುತ್ತೇವೆಂದು ₹10 ಕೋಟಿ ದೋಚಿದ ಖತರ್ನಾಕ್ ದಂಪತಿ.!

2 Mins Read

BREAKING : ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್ | Bengaluru Traffic

2 Mins Read

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

1 Min Read
Recent News

ನಿರುದ್ಯೋಗಿಗಳೇ ಎಚ್ಚರ : ಮನೆಯಿಂದಲೇ ಕೆಲಸ ಕೊಡುತ್ತೇವೆಂದು ₹10 ಕೋಟಿ ದೋಚಿದ ಖತರ್ನಾಕ್ ದಂಪತಿ.!

BREAKING : ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್ | Bengaluru Traffic

​ಯುವ ಭಾರತೀಯರಲ್ಲಿ ಹೆಚ್ಚುತ್ತಿದೆ ಸದ್ದಿಲ್ಲದ ಆಪತ್ತು: ದೇಶದ ಶೇ. 50 ರಷ್ಟು ಯುವಕರಲ್ಲಿ ‘ಫ್ಯಾಟಿ ಲಿವರ್’ ಸಮಸ್ಯೆ: ಅಧ್ಯಯನದಿಂದ ಆಘಾತಕಾರಿ ಸತ್ಯ ಬಹಿರಂಗ

BREAKING: ​ಹಸಿರು ಇಂಧನಕ್ಕೆ ಭಾರಿ ಉತ್ತೇಜನ: ಶೇ. 22 ರಿಂದ 30 ರಷ್ಟು ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ!

State News
KARNATAKA

ನಿರುದ್ಯೋಗಿಗಳೇ ಎಚ್ಚರ : ಮನೆಯಿಂದಲೇ ಕೆಲಸ ಕೊಡುತ್ತೇವೆಂದು ₹10 ಕೋಟಿ ದೋಚಿದ ಖತರ್ನಾಕ್ ದಂಪತಿ.!

By kannadanewsnow57 KARNATAKA 2 Mins Read

ಹಾವೇರಿ: ಸ್ವಯಂ ಉದ್ಯೋಗ ಮತ್ತು ಮನೆಯಿಂದಲೇ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ನೂರಾರು ಮಹಿಳೆಯರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ದಂಪತಿಯೊಂದು…

BREAKING : ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್ | Bengaluru Traffic

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.