ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅಧಿಕಾರ ಅವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ.
ಡಾ. ಅಲೋಕ್ ಮೋಹನ್ 1987 ರಲ್ಲಿ 22 ವರ್ಷ ವಯಸ್ಸಿನಲ್ಲೇ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಸೇರಿದರು. ಅವರ 38 ವರ್ಷಗಳ ಪೊಲೀಸ್ ಸೇವೆಯಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಸವಾಲಿನ ಮತ್ತು ನಿರ್ಣಾಯಕ ಕಾರ್ಯಯೋಜನೆಗಳಲ್ಲಿ ಸೇವೆ ಸಲ್ಲಿಸಿದ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ.
ಮೇ, 2023 ರಿಂದ ಅವರು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕ ಸೇವೆ, ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಜಾರಿ ಕ್ಷೇತ್ರದಲ್ಲಿ ಅವರ ಪ್ರಾಯೋಗಿಕ, ವಿಶ್ಲೇಷಣಾತ್ಮಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳಿಗೆ ಅವರು ಹೆಸರುವಾಸಿಯಾಗಿದ್ದಾರೆ.
ಇಂಡಸ್ಇಂಡ್ ಬ್ಯಾಂಕ್ ಸಿಇಒ ಹುದ್ದೆಗೆ ಸುಮಂತ್ ಕಠ್ಪಾಲಿಯಾ ರಾಜೀನಾಮೆ | Sumant Kathpalia resigns