ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸನ್ನದ್ದು ಮಾಲೀಕರು ಸಿಡಿದೆದ್ದಿದ್ದಾರೆ. ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನವೆಂಬರ್.20ರಂದು ರಾಜ್ಯಾಧ್ಯಂತ ಮದ್ಯ ಮಾರಾಟ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಅಬಕಾರಿ ಇಲಾಖೆಗೆ ಮಂತ್ರಿ ಬೇಕಾಗಿಲ್ಲ ಎಂಬುದಾಗಿ ಒತ್ತಾಯಿಸಿ ನವೆಂಬರ್.20ರಂದು ರಾಜ್ಯಾಧ್ಯಂತ ಮದ್ಯ ಮಾರಾಟ ಬಂದ್ ಮಾಡಿ ಪ್ರತಿಭಟನೆಯನ್ನು ಮದ್ಯ ಮಾರಾಟಗಾರರು ನಡೆಸಲಿದ್ದಾರೆ. ಅಲ್ಲದೇ ಹಣಕಾಸು ಸಚಿವರಿಗೆ ಅಬಕಾರಿ ಇಲಾಖೆಯ ಹೊಣೆ ನೀಡುವಂತೆಯೂ ಒತ್ತಾಯಿಸಲಾಗುತ್ತಿದೆ.
ವರ್ಗಾವಣೆ, ಪ್ರಮೋಷನ್ ಗೆ ಕೋಟಿ ಕೋಟಿ ಲಂಚ ನೀಡಬೇಕು. ಹೀಗಾಗಿ ಸನ್ನದುದಾರರಿಂದ ಮನಸೋ ಇಚ್ಛೆ ಲಂಚವನ್ನು ಸ್ವೀಕರಿಸುತ್ತಿದ್ದಾರೆ. ಇಂತಹ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿಯೂ ಆಗ್ರಹಿಸಲಿದ್ದಾರೆ.
ಅಬಕಾರಿ ಇಲಾಖೆಯ ಲಂಚಾವತಾರದಿಂದ ನಕಲಿ ಅಂತರರಾಜ್ಯ ಮದ್ಯ ಹೆಚ್ಚಳವಾಗಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ನಿಲ್ಲಿಸುವಂತೆ ಆಗ್ರಹಿಸಿ ನವೆಂಬರ್.20ರಂದು ರಾಜ್ಯಾಧ್ಯಂತ ಮದ್ಯ ಮಾರಾಟ ಬಂದ್ ಮಾಡಿ ಸನ್ನದು ಮಾಲೀಕರು ಮುಷ್ಕರ ನಡೆಸಲಿದ್ದಾರೆ.
BREAKING : ತುಮಕೂರಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ದಾರುಣ ಸಾವು!