ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ, ಇತರೆ ಮಾಧ್ಯಮದ ಜೊತಕೆಗೆ ಆಂಗ್ಲ ಅಂದರೆ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಇಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಆದೇಶ ಸಂಖ್ಯೆ ಇಡಿ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ.
ಏಕ ಕಡತದಲ್ಲಿ ಜನಪ್ರತಿನಿಧಿಗಳಿಂದ, ಪೋಷಕರಿಂದ, ಶಾಲಾ ಅಭಿವೃದ್ಧಿ ಸಮಿತಿಗಳಿಂದ ಹಾಗೂ ಅಧಿಕಾರಿಗಳಿಂದ ದ್ವಿಭಾಷಾ ಮಾಧ್ಯಮ ಪ್ರಾರಂಭಿಸುವಂತೆ ಮನವಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಪರಿಶೀಲಿಸಿ ವುಸ್ತುತ 1ನೇ ತರಗತಿಯಲ್ಲಿ 16 ಮಕ್ಕಳಿಗಿಂತ ಹೆಚ್ಚಿರುವ ಹಾಗೂ ಒಟ್ಟಾರೆ ದಾಖಲಾತಿ 100 ಇರುವ ಮಾನದಂಡ ಅನುಸರಿಸಿ ಒಟ್ಟು 373 ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ 373 ಶಾಲೆಗಳಿಗೆ ದ್ವಿ, ಭಾಷಾ ಮಾಧ್ಯಮ ತರಗತಿಗಳನ್ನು ಯಾವುದೇ ಆರ್ಥಿಕ ಹೊರೆ ಇಲ್ಲದಂತೆ ಷರತ್ತು ಬದ್ಧವಾಗಿ ಪ್ರಾರಂಭಿಸಲು ಸರ್ಕಾರದ ಅನುಮೋದನೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿನ ರಾಜ್ಯದ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದಿಂದ 300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿಗೆ JSW ಸಹಿ: ಸಚಿವ ಕೆ.ಜೆ. ಜಾರ್ಜ್