ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಲೋಕಸೇವಾ ಆಯೋಗದ ನೂತನ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರನ್ನು ನೇಮಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕೆಪಿಎಸ್ಸಿ ಕಾರ್ಯದರ್ಶಿಯಾಗಿದ್ದಂತ ಲತಾ ಕುಮಾರಿ.ಕೆಎಸ್ ಅವರನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದಂತ 2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್.ಕೆ ಅವರನ್ನು ನೇಮಿಸಿ ಆದೇಶಿಸಿದೆ.
ಇನ್ನೂ 2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಲತಾ ಕುಮಾರಿ ಕೆಎಸ್ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಶಾಲೆಗಳ ಸೊಸೈಟಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ನೇಮಿಸಿ ಆದೇಶಿಸಿದೆ.
ನನಗೆ ದೇಶವೇ ಮೊದಲು, ಅವರಿಗೆ ಕುಟುಂಬವೇ ಮೊದಲು: ವಿಪಕ್ಷಳಿಗೆ ತಿವಿದ ಪ್ರಧಾನಿ ನರೇಂದ್ರ ಮೋದಿ
ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ