ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ಜಿಎಸ್ ಮಂಜುನಾಥ್ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ.
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ.ಸುಮಿತ್ರ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಜಿಎಸ್ ಮಂಜುನಾಥ್, ಮುನಿಸಿಪಲ್ ಕಾಲೋನಿ, ಕೆಳಗೋಟೆ, ಚಿತ್ರದುರ್ಗ ಇವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಂಪನಿ ಆಕ್ಟ್ 2013ರ ಆರ್ಟಿಕಲ್ಸ್ ಆಫ್ ಅಸೋಷಿಯೇಷನ್ ಆಫ್ ದಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಂ 29(i)ರ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.
ಅಂದಹಾಗೇ ಜಿ.ಎಸ್ ಮಂಜುನಾಥ್ ಅವರು ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಹಿರಿಯೂರು ನಗರದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಭಾಷಣ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಆ ಬಳಿಕ ಜಿ.ಎಸ್ ಮಂಜನಾಥ್ ವಿರುದ್ಧ ಕೇಸ್ ದಾಖಲಾಗಿತ್ತು.
BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ