ಬೆಂಗಳೂರು: ಬಳ್ಳಾರಿ ಉಸ್ತುವಾರಿ ಸಚಿವರಾಗಿದ್ದಂತ ಬಿ.ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಪ್ರಕರಣದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಳಿಕ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಬಳ್ಳಾರಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಪುಟ್ಟರಾಮು.ಆರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಬಿ ಜೆಡ್ ಜಮೀರ್ ಅಹ್ಮದ್ ಖಾನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಮ ಸಚಿವರು ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಸಲಾಗಿದೆ ಎಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

‘ರಾಕೇಶ್ ಶೆಟ್ಟಿ’ ವಿರುದ್ಧ ‘ರೌಡಿ ಶೀಟರ್’ ಓಪನ್ ಮಾಡಿ: ‘ಗಿರೀಶ್ ಮಟ್ಟೆಣ್ಣವರ’ ಆಗ್ರಹ

Share.
Exit mobile version