ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಸಮುದಾಯದವರು ಸಲ್ಲಿಸಿರುವಂತ 408 ಪ್ರಸ್ತಾವಕ್ಕೆ ಅನುಮೋದನೆ ನೀಡಿರುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ವಿಧಾನ ಮಂಡಲದ ಕಲಾಪದಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ಜಮೀನುಗಳನ್ನು ಪರಭಾರೆ ಮಾಡಲು ಅನುಮತಿ ಕೋರಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೂರು ವರ್ಷಗಳಿಂದ ಈವರೆಗೆ ಸಲ್ಲಿಸಿರುವ 625 ಪ್ರಸ್ತಾವಗಳಲ್ಲಿ 408ಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
217 ಪ್ರಸ್ತಾವಗಳನ್ನು ವಿವರಣೆ ಕೋರಿ ಜಿಲ್ಲಾಧಿಕಾರಿಗಳಿಗೆ ಹಿಂತಿರುಗಿಸಲಾಗಿದೆ. ವಿವಿಧ ಟ್ರಸ್ಟ್, ಶಾಲೆಗಳಿಗೆ ಹಾಗೂ ಇತರೆ ಉದ್ದೇಶಕ್ಕಾಗಿ ಜಮೀನು ಮಂಜೂರಾತಿ ಕೋರಿ ಸರ್ಕಾರಕ್ಕೆ 131 ಪ್ರಸ್ತಾವಗಳು ಬಂದಿವೆ. ಈ ಪೈಕಿ 62 ಪ್ರಸ್ತಾವಗಳಿಗೆ ಮಂಜೂರಾತಿ ನೀಡಲಾಗಿದೆ. 25 ಪ್ರಸ್ತಾವಗಳನ್ನು ತಿರಸ್ಕರಿಸಲಾಗಿದೆ. ವಿವರಣೆ ಕೋರಿ 44 ಪ್ರಸ್ತಾವಗಳನ್ನು ಜಿಲ್ಲಾಧಿಕಾರಿಗಳಿಗೆ ವಾಪಸು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯದಲ್ಲಿ ‘ಶಾಸಕ ಅಜಯ್ ಸಿಂಗ್’ ಗೆಲುವು: ಬಹುಮಾನ ವಿತರಿಸಿದ ಸಿಎಂ
ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024