Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ‘ATM’ ವಹಿವಾಟು ಶುಲ್ಕದಲ್ಲಿ ಭಾರೀ ಏರಿಕೆ | ATM Charges Hikes

14/01/2026 6:27 AM

BIG NEWS : ಶಬರಿಮಲೆಯಲ್ಲಿ ಇಂದು ‘ಮಕರ ಜ್ಯೋತಿ’ ದರ್ಶನ : ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರ ಕಾತರ.!

14/01/2026 6:22 AM

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಹಾಸನಾಂಭ ಉತ್ಸವ’ದ ವೇಳೆ ‘VIP ಸಂಪ್ರದಾಯ’ಕ್ಕೆ ಬ್ರೇಕ್
KARNATAKA

ರಾಜ್ಯ ಸರ್ಕಾರದಿಂದ ‘ಹಾಸನಾಂಭ ಉತ್ಸವ’ದ ವೇಳೆ ‘VIP ಸಂಪ್ರದಾಯ’ಕ್ಕೆ ಬ್ರೇಕ್

By kannadanewsnow0907/10/2025 6:10 AM

ಬೆಂಗಳೂರು ; ನಾಡಿನ ವಿಖ್ಯಾತ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಸೋಮವಾರ ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾಸನಾಂಭ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು.

“ಕಳೆದ ವರ್ಷ ಹಾಸನದಲ್ಲಿ ವಿಐಪಿ ಗಳ ಎಸ್ಕಾರ್ಟ್ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು” ಎಂದು ಮಾಹಿತಿ ನೀಡಿದರು.

ಮುಂದುವರೆದು, “ ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶ ಇಲ್ಲ” ಎಂದು ಅವರು ತಿಳಿಸಿದರು.

“ಇದಲ್ಲದೆ, 1000 ರೂ ಹಾಗೂ 300 ರೂ ಬೆಲೆಯ ಪಾಸ್ಗಳನ್ನೂ ವಿತರಿಸಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜೊತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸ್ಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್ನಲ್ಲಿ ಆಗಮಿಸುವವರಿಗೆ ಬೆಳಗ್ಗೆ 10.30 ರಿಂದ 12.30ರ ವರೆಗೆ ಅವಕಾಶ ಇರಲಿದೆ. ಪಾಸ್ ಪಡೆದವರಿಗೆ ಬೆಳಗ್ಗೆ 7.30 ರಿಂದ 10ರ ನಡುವೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1000 ಪಾಸ್ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದರು.

ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಹೆಚ್ಚಳ:

“ಹಾಸನಾಂಭ ದೇವಾಲಯಕ್ಕೆ 2021 ರಲ್ಲಿ 1ಲಕ್ಷ ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022 ರಲ್ಲಿ 3 ಲಕ್ಷ ಹಾಗೂ 2023 ರಲ್ಲಿ 6 ಲಕ್ಷ ಜನ ಭೇಟಿ ನೀಡಿದ್ದಾರೆ. ಕಳೆದ ವರ್ಷ 20 ಲಕ್ಷ ಜನ ಭೇಟಿ ನೀಡಿದ್ದಾರೆ. ಹೀಗಾಗಿ ಈ ವರ್ಷ 25ಲಕ್ಷ ಜನ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಈ ಬಾರಿ ಇರಲಿದೆ ಸಾಂಸ್ಕೃತಿಕ ಕಾರ್ಯಕ್ರಮ

ಅಕ್ಟೋಬರ್ 9 ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, “ಮೂರು ವೇದಿಕೆ ಸಿದ್ದಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ.

ಇದರ ಜೊತೆಗೆ ಟೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ, ಸ್ತ್ರಿ ಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜೊತೆಗೆ ಮಾತನಾಡಿದ್ದು ಹಾಸನಾಂಭ ಟೂರ್ ಪ್ಯಾಕೇಜ್ ಸಹ ಆರಂಭಿಸುವ ಇರಾದೆ ಇದೆ ” ಎಂದರು.

ಭದ್ರತೆಗೆ ಒತ್ತು:

“ಜನ ಸಂದಣಿ ನಿಯತ್ರಿಸುವ ಸಲುವಾಗಿ 2000 ಪೊಲೀಸರನ್ನು ನೇಮಕ ಮಾಡಲಾಗಿದೆ. 280 ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾ ಸಹ ಬಳಕೆಯಲ್ಲಿದ್ದು, ಎಲ್ಲವಕ್ಕೂ ಎಐ ತಂತ್ರಜ್ಞಾನ ಬಳಸಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ‘ATM’ ವಹಿವಾಟು ಶುಲ್ಕದಲ್ಲಿ ಭಾರೀ ಏರಿಕೆ | ATM Charges Hikes

14/01/2026 6:27 AM2 Mins Read

BIG NEWS : ಶಬರಿಮಲೆಯಲ್ಲಿ ಇಂದು ‘ಮಕರ ಜ್ಯೋತಿ’ ದರ್ಶನ : ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರ ಕಾತರ.!

14/01/2026 6:22 AM2 Mins Read

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM3 Mins Read
Recent News

BIG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ‘ATM’ ವಹಿವಾಟು ಶುಲ್ಕದಲ್ಲಿ ಭಾರೀ ಏರಿಕೆ | ATM Charges Hikes

14/01/2026 6:27 AM

BIG NEWS : ಶಬರಿಮಲೆಯಲ್ಲಿ ಇಂದು ‘ಮಕರ ಜ್ಯೋತಿ’ ದರ್ಶನ : ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರ ಕಾತರ.!

14/01/2026 6:22 AM

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM
State News
KARNATAKA

BIG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ‘ATM’ ವಹಿವಾಟು ಶುಲ್ಕದಲ್ಲಿ ಭಾರೀ ಏರಿಕೆ | ATM Charges Hikes

By kannadanewsnow5714/01/2026 6:27 AM KARNATAKA 2 Mins Read

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಶುಲ್ಕಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಇತರ ಬ್ಯಾಂಕ್ ಎಟಿಎಂಗಳಲ್ಲಿ ತಿಂಗಳಿಗೆ 5…

BIG NEWS : ಶಬರಿಮಲೆಯಲ್ಲಿ ಇಂದು ‘ಮಕರ ಜ್ಯೋತಿ’ ದರ್ಶನ : ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರ ಕಾತರ.!

14/01/2026 6:22 AM

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.