Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ 1.1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ : ಹಾವೇರಿ ಬೃಹತ್ ಸಮಾವೇಶದಲ್ಲಿ 6ನೇ ಗ್ಯಾರಂಟಿ ಸಮರ್ಪಣೆ.!
KARNATAKA

ರಾಜ್ಯ ಸರ್ಕಾರದಿಂದ 1.1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ : ಹಾವೇರಿ ಬೃಹತ್ ಸಮಾವೇಶದಲ್ಲಿ 6ನೇ ಗ್ಯಾರಂಟಿ ಸಮರ್ಪಣೆ.!

By kannadanewsnow5715/02/2026 5:35 AM

ಹಾವೇರಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1,000 ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಶನಿವಾರ ಆಯೋಜಿಸಿದ್ದ ಭೂಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಸರ್ಕಾರದ 6ನೇ ಗ್ಯಾರಂಟಿಯನ್ನು ಪೂರೈಸಿತು.

ರಾಜ್ಯ ಸರ್ಕಾರಕ್ಕೆ ಸಹಸ್ರ ದಿನಗಳು ಪೂರೈಸಿದ ಪ್ರಯುಕ್ತ ಹಾವೇರಿಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ.‌ ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ ಆಗಿದೆ.‌ GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನುಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾಭಿಪ್ರಾಯ ವ್ಯಕ್ತಪಡಿಸಿವೆ. ಹೀಗಿದ್ದರೂ ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ.

ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತೆ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆಯಿರಿಸಿದ್ದೇವೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಈಗ ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನೆಯೇ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ.‌ ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ… pic.twitter.com/4khDt6BAa1

— Siddaramaiah (@siddaramaiah) February 14, 2026

State government distributes land titles to 1.1 lakh people: 6th guarantee presentation at Haveri grand convention!
Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.