ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.9ರಿಂದ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಡಿಸೆಂಬರ್.27, 2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದ್ದಾವೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ ಅವರು ಚುನಾವಮಾ ಅಧಿಸೂಚನೆ ಹೊರಡಿಸಿದ್ದಾರೆ. ಅದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾಧಿಕಾರಿಯಾದ ನಾನು, 2024-29ನೇ ಅವಧಿಯ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಯನ್ನು ಸಂಘದ ಶಾಖೆಗಳಿಗೆ ಈ ಕೆಳಕಂಡಂತೆ ಚನಾವಣಾ ವೇಳಾಪಟ್ಟಿಯಂತೆ ಚುನಾವಣೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಹೀಗಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ
- ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 09-10-2024ರಿಂದ ದಿನಾಂಕ 28-10-2024ರವರೆಗೆ ಚುನಾವಣೆ ನಡೆಯಲಿದೆ.
- ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ದಿನಾಂಕ 30-10-2024ರಿಂದ 16-11-2024ರವರೆಗೆ ಚುನಾವಣೆ ನಡೆಯಲಿದೆ.
- ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ದಿನಾಂಕ 19-11-2024 ರಿಂದ 04-12-2024ರವರೆಗೆ ನಡೆಯಲಿದೆ.
- ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತಕ್ಷೇತ್ರವಾರು ಸ್ಥಾನಗಳಿಗೆ ದಿನಾಂಕ 17-09-2024ರಿಂದ ದಿನಾಂಕ 04-12-2024ರವರೆಗೆ ಚುನಾವಣೆ ನಡೆಸಲು ನಿಗದಿ ಪಡಿಸಲಾಗಿದೆ.
- ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಗಳು ದಿನಾಂಕ 09-12-2024ರಿಂದ 27-12-2024ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ‘ಭದ್ರತಾ ಲೋಪ’ ಕೇಸ್: ಆರೋಪಿ ವಿರುದ್ಧ ‘FIR’ ದಾಖಲು
ಅರವಿಂದ್ ಕೇಜ್ರಿವಾಲ್ ರಾಜೀನಾಮೆ: ಇಲ್ಲಿದೆ ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
BIG UPDATE: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯವೆಸಗಿದ್ದ ಶಿಕ್ಷಕ ಅರೆಸ್ಟ್: ಸೇವೆಯಿಂದ ಅಮಾನತು