ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆಯಾಗಿದೆ. ಇದಕ್ಕೆ ತಯಾರಿಯಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ. ಈ ಹೊತ್ತಿನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಸರ್ಕಾರಿ ವಸತಿ ಗೃಹ ತೆರವಿಗೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದಂತ ಸಿ.ಎಸ್ ಷಡಕ್ಷರಿ ಅವರು ಈ ಹಿಂದೆ ಶಿವಮೊಗ್ಗದ ಲೆಕ್ಕಾಧಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಸರ್ಕಾರಿ ವಸತಿ ಗೃಹದಲ್ಲಿ ವಾಸವಾಗಿದ್ದರು. ಶಿವಮೊಗ್ಗದಿಂದ ಕೋಲಾರಕ್ಕೆ ಅವರನ್ನು ವರ್ಗಾವಣೆಗೊಳಿಸಿದ ನಂತ್ರವೂ, ಶಿವಮೊಗ್ಗದ ಸರ್ಕಾರಿ ವಸತಿ ಗೃಹವನ್ನು ಖಾಲಿ ಮಾಡಿರಲಿಲ್ಲ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಶಿವಮೊಗ್ಗದಲ್ಲಿನ ಲೋಕೋಪಯೋಗಿ ಇಲಾಖೆ ನೀಡಿದ್ದಂತ ವಸತಿ ಗೃಹವನ್ನು ತೆರವುಗೊಳಿಸುವಂತೆ ಕಾರ್ಯಪಾಲಕ ಎಂಜಿನಿಯರ್ ಸೂಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೂಚನೆಯ ಮೇರೆಗೆ ಶಿವಮೊಗ್ಗದ ಸರ್ಕಾರಿ ವಸತಿ ಗೃಹವನ್ನು ಸಿಎಸ್ ಷಡಕ್ಷರಿ ತೆರವುಗೊಳಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ ಶಿವಕುಮಾರ್
BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!