ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಾಲ್ವರು ಪದಾಧಿಕಾರಿಗಳು ಸೇರಿದ್ದಾರೆ. ಇವರ ಒಲವು ಯಾರ ಕಡೆಗೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದೆ.
ಕೆಲ ದಿನಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆದಿತ್ತು. ತಾಲ್ಲೂಕು ಘಟಕದಿಂದ ಈಗಾಗಲೇ ಪದಾಧಿಕಾರಿಗಳ ಆಯ್ಕೆಯಾಗಿದೆ. ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರು ಒಳಗೊಂಡಂತೆ 947 ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ರಾಜ್ಯ ಚುನಾವಣಾಧಿಕಾರಿ ಹನುಮನರಸಯ್ಯ ಪ್ರಕಟಿಸಿರುವಂತ ಮತದಾರರ ಪಟ್ಟಿಯಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್.ಎನ್, ಕಾರ್ಯದರ್ಶಿ ಅಣ್ಣಪ್ಪ.ಡಿ.ಕೆ, ಖಜಾಂಚಿ ಸಹದೇವ್ ಎಸ್ ಬಡಿಗೇರ ಹಾಗೂ ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ.ಕೆ ಕೂಡ ಸೇರಿದ್ದಾರೆ.
ಅಂದಹಾಗೇ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವಂತ ಸಂತೋಷ್ ಕುಮಾರ್.ಎನ್ ಅವರು ಸಂಘದಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡಿರೋರು. ಜಿಲ್ಲಾ ಸಂಘದಲ್ಲಿ ಸಾಗರ, ಹೊಸನಗರ, ಸೊರಬ ಭಾಗಕ್ಕೆ ಪ್ರಾತಿನಿಧ್ಯ ಸಿಗದಿದ್ದರೂ, ಈ ಬಾರಿ ರಾಜ್ಯ ಸಂಘದಲ್ಲಿ ಪ್ರಮುಖ ಹುದ್ದೆ ಸಿಗುವಂತ ನಿರೀಕ್ಷೆಯಲ್ಲಿದ್ದಾರೆ ಎಂಬುದಾಗಿ ಬಲ್ಲ ಮೂಲಗಳ ಮಾಹಿತಿ.
ಇನ್ನೂ ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾಗಿರುವಂತ NPS ಯೋಜನೆ ರದ್ದು ಗೊಳಿಸುವ ಬಗ್ಗೆ ದೃಢ ನಿರ್ಧಾರ ತೆಗೆದು ಕೊಳ್ಳಬೇಕೆಂದು ರಾಜ್ಯ ಅಧ್ಯಕ್ಷ ಚುನಾವಣೆ ಸ್ಪರ್ದಿಸಿರುವ ಅಭ್ಯರ್ಥಿಗಳಿಗೆ ಸಾಗರ ತಾಲ್ಲೂಕು ನೌಕರರ ಸಂಘದ ಮತದಾರರು ಒತ್ತಾಯಿಸಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರಾಗುವವರು ಮುಂದಾಗಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.
ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ನಡೆ ಯಾರ ಕಡೆಗೆ.?
ಡಿಸೆಂಬರ್.8ರಂದು ಬೆಂಗಳೂರಲ್ಲಿ ನಡೆದಂತ ಸಮಾಲೋಚನಾ ಸಭೆಯಲ್ಲಿ ಹಾಜರಿದ್ದಂತ 850ಕ್ಕೂ ಹೆಚ್ಚು ಮತದಾರರು ಅಧ್ಯಕ್ಷ ಸ್ಥಾನಕ್ಕೆ ಸಿ.ಎಸ್ ಷಡಕ್ಷರಿ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಆದರೇ ಡಿಸೆಂಬರ್.27ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು, ಅಂದು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿ ಅವರು ಯಾರಿಗೆ ಮತ ಚಲಾಯಿಸಲಿದ್ದಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ. ಡಿ.27ರ ಚುನಾವಣೆ ನಂತ್ರ ಘೋಷಣೆಯಾಗುವ ಫಲಿತಾಂಶದ ಮೂಲಕ ಅಧಿಕೃತ ಮಾಹಿತಿ ಹೊರ ಬೀಳಲಿದೆ.
ವರದಿ: ವಸಂತ ಬಿ ಈಶ್ವರಗೆರೆ
BREAKING: ಶಿವಮೊಗ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ