ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ಕುರಿತಂತೆ  ಭರವಸೆ ನೀಡಿದ್ದಾರೆ.

ನೌಕರರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂಧಿಸಿ, ನಮ್ಮ ಸರ್ಕಾರ ಸರ್ಕಾರಿ ನೌಕರರ ಪರವಾಗಿದೆ ಎಂದು ತಿಳಿಸಿ, ಈಗಾಗಲೇ ಸಚಿವ ಸಂಪುಟದಲ್ಲಿ 7 ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ವೇತನ ಭತ್ಯೆಗಳನ್ನು ಪರಿಷ್ಕರಿಸುವ ಸ್ಪಷ್ಟ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಅಂತಿಮವಾಗಿ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿದೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗ ವರದಿಯ ಸಂಪೂರ್ಣ ಸಾರಾಂಶ

Share.
Exit mobile version