ಬೆಂಗಳೂರು : ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2012ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದುಪಡಿಯನ್ವಯ ದಿನಾಂಕವನ್ನು “31-12-2025 ರವರೆಗೆ” ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿರುತ್ತದೆ.
ಸುತ್ತೋಲೆ ಸಂಖ್ಯೆ: ಸಿಆಸುಇ 29 ಸೇವೆನೆ 2020, ದಿನಾಂಕ: 03-04-2023ರಲ್ಲಿ ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ದಿನಾಂಕ: 31-12-2025 ರ ಒಳಗೆ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.
ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವ / https://clt.karnataka.gov.in ಹಾಗೂ ನಿಗಮದ ವೆಬ್ ಸೈಟ್ / https://nkclt.clt.karnataka.gov.in ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದಾಗಿರುತ್ತದೆ.