ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಆಗಸ್ಟ್.1ರಿಂದ 7ನೇ ವೇತನ ಆಯೋಗವನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಹಾಗಾದ್ರೇ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ ಎಷ್ಟು ವೇತನ ಹೆಚ್ಚಳ ಆಗಲಿದೆ ಎನ್ನುವ ಬಗ್ಗೆ ಡೀಟೆಲ್ಸ್ ಮುಂದಿದೆ ಓದಿ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. 7ನೇ ವೇತನ ಆಯೋಗದ ಜಾರಿಯೇ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಅಜೆಂಡಾ ಆಗಿತ್ತು. ಇಂತಹ ಬೇಡಿಕೆಯನ್ನು ಈಡೇರಿಸುವಂತ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್.1ರಿಂದ ಜಾರಿಗೊಳಿಸುವಂತೆ 7ನೇ ವೇತನ ಆಯೋಗವನ್ನು ಜಾರಿಗೆ ತರುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೀಗಾಗಿ ಆಗಸ್ಟ್.1ರಿಂದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವು ಜಾರಿಗೊಳ್ಳಲಿದೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1-7- 22 ರಿಂದ ಕಾಲ್ಪನಿಕವಾಗಿ ವೇತನ ನಿಗದಿ, 1-8- 24 ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸು ಮಾಡಿದ 27.50% ವೇತನ ವೇತನ ನಿಗದಿಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿರುತ್ತದೆ ಅಂತ ತಿಳಿಸಿದ್ದಾರೆ.
ಈ ಕಾರಣಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ರಾಜ್ಯದ ಎಲ್ಲ ಸಚಿವರಿಗೆ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷನಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಎಷ್ಟು ಸಂಬಳ ಹೆಚ್ಚಾಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ