Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ತುಟ್ಟಿ ಭತ್ಯೆ’ಯ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ತುಟ್ಟಿ ಭತ್ಯೆ’ಯ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!

By kannadanewsnow5729/11/2024 7:12 AM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ.

ಇಂದು ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿತ್ತು, ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ದಿನಾಂಕ: 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ಹೇಳಿದೆ.

ಮುಂದುವರೆದು, ಸದರಿ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸಲು ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ ಎಂದಿದೆ.

ಭಾರತ ಸರ್ಕಾರದ ಆದೇಶವನ್ನು ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ಸರ್ಕಾರವು ಪರಿಗಣಿಸಿರುತ್ತದೆ ಮತ್ತು 6ನೇ ರಾಜ್ಯ ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ ಎಂದು ತಿಳಿಸಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿದ್ದ ರಾಜ್ಯ ಸರ್ಕಾರಿ ನೌಕರರುಗಳಿಗೆ ಜುಲೈ 2024ರ ಮಾಹೆಗೆ ಅನ್ವಯವಾಗುವಂತೆ ತುಟ್ಟಿ ಭತ್ಯೆಯ ದರಗಳನ್ನು ಜುಲೈ, ಮಾಹೆಯ ಮೂಲ ವೇತನದ 42.50% ರಿಂದ 45.25% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರವು ಹರ್ಷಿಸುತ್ತದೆ. ತುಟ್ಟಿ ಭತ್ಯೆಯ ಪರಿಷ್ಕರಣೆಯ ಆರ್ಥಿಕ ಲಾಭವು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು.

2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,
(ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,
(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

3.ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

4. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ತುಟ್ಟಿಭತ್ಯೆಯ ದರಗಳನ್ನು ಪ್ರಸಕ್ತ 2018ರ ಪರಿಷ್ಕೃತ ವೇತನ ಶ್ರೇಣಿಗಳ 2024 ಜುಲೈ ಮಾಹೆಯ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ 42.50% ರಿಂದ ಶೇಕಡ 45.25% ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ. ತುಟ್ಟಿ ಭತ್ಯೆಯ ಪರಿಷ್ಕರಣೆಯ ಆರ್ಥಿಕ ಲಾಭವು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು.

5. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ ಮತ್ತು ಅದು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು.

6. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

7. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.

8. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.

9. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

10. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ

State government employees should note: An official order from the state government revising the rates of 'Dearness Allowance'. ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.