Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತಿ ಸಿಮೆಂಟ್ಸ್ ನಿರ್ದೇಶಕ `ಗೋವಿಂದಪ್ಪ ಬಾಲಾಜಿ’ ಅರೆಸ್ಟ್ |Govindappa Balaji arrested

14/05/2025 7:45 AM

ಹಿರಿಯ ವಕೀಲರ ಹುದ್ದೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್ | senior advocate designations

14/05/2025 7:43 AM

BR Gavai: ಇಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಬಿಆರ್ ಗವಾಯಿ ಪ್ರಮಾಣ ವಚನ

14/05/2025 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ನೀವು ಪಾಲಿಸಬೇಕಾದ ʻಸೇವಾʼ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ನೀವು ಪಾಲಿಸಬೇಕಾದ ʻಸೇವಾʼ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ

By kannadanewsnow5715/07/2024 7:00 PM

ಬೆಂಗಳೂರು : ಸರ್ಕಾರಿ ನೌಕರರ ಸೇವೆಗೆ ಸೇರಿದ ನಂತರ ನಡೆದುಕೊಳ್ಳಬೇಕಾದ ಕಡ್ಡಾಯ ಸೇವಾ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 ರಲ್ಲಿ ಪ್ರಕಟಿಸಲಾಗಿದ್ದು, ಇಲ್ಲಿದೆ ಸರ್ಕಾರಿ ಸೇವೆಗೆ ಸೇರಿದ ನಂತರ ನೌಕರರು ಪಾಲಿಸಬೇಕಾದ ಸಂಪೂರ್ಣ ಮಾಹಿತಿ.

ಸರ್ಕಾರಿ ನೌಕರ ಎಂದರೆ. ಕರ್ನಾಟಕ ರಾಜ್ಯದ ನಾಗರಿಕ ಸೇವಾ ಸದಸ್ಯನಾಗಿರುವ ಅಥವಾ ಕರ್ನಾಟಕ ರಾಜ್ಯದ ವ್ಯವಹಾರಗಳಿಗೆ ಸಂಬಂಧಪಟ್ಟ ನಾಗರಿಕ ಹುದ್ದೆಯನ್ನು ಧಾರಣ ಮಾಡಿರುವಂಥ ಯಾರೇ ವ್ಯಕ್ತಿ ಎಂದು ಅರ್ಥ ಹಾಗೂ ಅದು, ಯಾವ ವ್ಯಕ್ತಿಯ ಸೇವೆಗಳನ್ನು ತಾತ್ಕಾಲಿಕವಾಗಿ ಭಾರತ ಸರ್ಕಾರ, ಮತ್ತೊಂದು ರಾಜ್ಯ ಸರ್ಕಾರ, ಕಂಪನಿ, ನಿಗಮ, ನಿಗಮಿತವಾಗಿರುವ ಮಂಡಳಿ. ಸಂಸ್ಥೆ ಅಥವಾ ನಿಗಮಿತವಾಗಿಲ್ಲದಿರುವ ಸ್ಥಳೀಯ ಪ್ರಾಧಿಕಾರದ ಸೇವೆಗೆ ನಿಯೋಜಿಸಲಾಗಿದೆಯೋ ಅಂಥ ವ್ಯಕ್ತಿಯು ರಾಜ್ಯದ ಸಂಚಿತ ನಿಧಿಯ ಹೊರತಾದ ಇತರ ಯಾವುದೇ ಮೂಲಗಳಿಂದ ವೇತನ ಪಡೆದುಕೊಳ್ಳುತ್ತಿರುವುದು ಏನೇ ಇದ್ದರೂ ಅಂಥ ವ್ಯಕ್ತಿಯನ್ನು ಒಳಗೊಳ್ಳುತ್ತದೆ:

ವಿವರಣೆ: ಈ ನಿಯಮಗಳಲ್ಲಿ ಉಲ್ಲೇಖಿಸಲಾಗಿರುವ ‘ಸರ್ಕಾರಿ ನೌಕರ” ಎಂದರೆ ಈ ನಿಯಮಗಳು ಅನ್ವಯವಾಗುವ ಯಾವುದೇ ವರ್ಗ ಅಥವಾ ಸೇವೆಗೆ ಸೇರಿದ ಅಧಿಕಾರಿ ಮತ್ತು ಸಿಬ್ಬಂದಿಗಳು

3 ಸರ್ಕಾರಿ ನೌಕರನಿಗೆ ಸಂಬಂಧಪಟ್ಟಂತೆ ‘ಕುಟುಂಬದ ಸದಸ್ಯರು’ ಎಂಬುದು:

(1) ಸಂದರ್ಭಾನುಸಾರ ಸರ್ಕಾರಿ ನೌಕರನ/ ನೌಕರಳ ಪತ್ನಿಯು ಅಥವಾ ಪತಿಯು, ಸರ್ಕಾರಿ ನೌಕರನ/ನೌಕರಳ ಜೊತೆ ವಾಸವಾಗಿರಲಿ ಅಥವಾ ಇಲ್ಲದಿರಲಿ ಅವರನ್ನು ಒಳಗೊಳ್ಳುತ್ತದೆ. ಆದರೆ ಸಕ್ಷಮ ನ್ಯಾಯಾಲಯದ ಡಿಕ್ರಿಯ ಅಥವಾ ಆದೇಶದ ಮೂಲಕ ಸರ್ಕಾರಿ ನೌಕರನಿಂದ/ ನೌಕರಳಿಂದ ಬೇರ್ಪಟ್ಟಿರುವ ಸಂದರ್ಭಾನುಸಾರ ಪತ್ನಿ ಅಥವಾ ಪತಿಯನ್ನು ಒಳಗೊಳ್ಳುವುದಿಲ್ಲ.

(ii) ಸರ್ಕಾರಿ ನೌಕರನ ಮತ್ತು ಸಂಪೂರ್ಣವಾಗಿ ಆತನ ಮೇಲೆಯೇ ಅವಲಂಬಿಸಿರುವ ಮಗನನ್ನು ಅಥವಾ ಮಗಳನ್ನು ಅಥವಾ ಮಲ-ಮಗ ಅಥವಾ ಮಲ-ಮಗಳನ್ನು ಒಳಗೊಳ್ಳುತ್ತದೆ. ಆದರೆ ಸರ್ಕಾರಿ ನೌಕರನ ಮೇಲೆ ಯಾವುದೇ ರೀತಿಯಲ್ಲಿ ಅವಲಂಬಿಸಿರದ ಅಥವಾ ಯಾವುದೇ ಕಾನೂನಿನ ಮೂಲಕ ಅಥವಾ ಅದರ ಮೇರೆಗೆ ಯಾವ ಮಗುವಿನ ಅಥವಾ ಮಲ ಮಗುವಿನ ಅಭಿರಕ್ಷೆಯನ್ನು ಸರ್ಕಾರಿ ನೌಕರನಿಗೆ ನೀಡಲಾಗಿಲ್ಲವೋ G ಮಗುವನ್ನು ಅಥವಾ ಮಲ-ಮಗುವನ್ನು ಒಳಗೊಳ್ಳುವುದಿಲ್ಲ

(iii) ಸರ್ಕಾರಿ ನೌಕರನಿಗೆ ಅಥವಾ ಸರ್ಕಾರಿ ನೌಕರನ/ನೌಕರಳ ಪತ್ನಿಗೆ ಅಥವಾ ಪತಿಗೆ ರಕ್ತ ಸಂಬಂಧದ ಅಥವಾ ವಿವಾಹದ ಮೂಲಕ ಸಂಬಂಧಿಯಾದ ಪೂರ್ಣವಾಗಿ ಸರ್ಕಾರಿ ನೌಕರರನ್ನೇ ಅವಲಂಬಿಸಿರುವ ಯಾರೇ ಇತರ ವ್ಯಕ್ತಿಯನ್ನು ಒಳಗೊಳ್ಳುತ್ತದೆ:

4 “ನಿಯಮಿಸಿದ ಪ್ರಾಧಿಕಾರ’ ಎಂದರೆ,-

(i) ಕರ್ನಾಟಕ ನ್ಯಾಯಿಕ ಸೇವೆಗೆ ಸೇರಿದ ವ್ಯಕ್ತಿಗಳ ಸಂದರ್ಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯ:

(ii) ಸಮೂಹ ಎ ದರ್ಜೆಯ ಯಾವುದೇ ಹುದ್ದೆಯನ್ನು ಹೊಂದಿರುವ ಮತ್ತು ಸಮೂಹ – ಬಿ ಯಲ್ಲಿ ತಹಶೀಲ್ದಾರ್ ದರ್ಜೆ-11 ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ

ಸಂಬಂಧದಲ್ಲಿ ಸರ್ಕಾರ:

(iii) ಸಮೂಹ ಬಿ ಯಲ್ಲಿನ ತಹಶೀಲ್ದಾರ್ ದರ್ಜೆ-II ಅನ್ನು ಹೊರತುಪಡಿಸಿ, ಸಮೂಹ-ಬಿ, ಸಮೂಹ-ಸಿ ಹಾಗೂ ಸಮೂಹ-ಡಿ ಯಲ್ಲಿನ ಯಾವುದೇ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ ಸಂಬಂಧದಲ್ಲಿ ಇಲಾಖೆಯ ಮುಖ್ಯಸ್ಥ:

ಪರಂತು ಇಲಾಖಾ ಮುಖ್ಯಸ್ಥರು ಆದೇಶದ ಮೂಲಕ ತಮ್ಮ ಆಡಳಿತ ನಿಯಂತ್ರಣಕ್ಕೆ ಒಳಪಡುವ ಯಾವುದೇ ಇತರೆ ಪ್ರಾಧಿಕಾರಿಗಳನ್ನು ಈ ಖಂಡದ ಉದ್ದೇಶಕ್ಕಾಗಿ ನಿಯಮಿತ ಪ್ರಾಧಿಕಾರವೆಂದು ನಿರ್ದಿಷ್ಟಪಡಿಸಬಹುದು.

ವಿವರಣೆ.- ಅನ್ಯ ಸೇವೆಯ ಮೇಲಿರುವ ಅಥವಾ ಇತರ ಯಾವುದೇ ಇಲಾಖೆಗೆ ಅಥವಾ

ಇತರ ಯಾವುದೇ ಸರ್ಕಾರಕ್ಕೆ ಪ್ರತಿನಿಯೋಜನೆಗೊಂಡಿರುವ, ಸರ್ಕಾರಿ ನೌಕರನ ಸಂದರ್ಭದಲ್ಲಿ,

ಸಂದರ್ಭಾನುಸಾರ (ii)ನೇ ಉಪ-ಖಂಡ ಅಥವಾ (iii)ನೇ ಉಪ-ಖಂಡದಲ್ಲಿ ನಿರ್ದಿಷ್ಟಪಡಿಸಿದ ಪ್ರಾಧಿಕಾರಗಳೇ ನಿಯಮಿಸಿದ ಪ್ರಾಧಿಕಾರವಾಗಿರತಕ್ಕದ್ದು.

(iv) ಅಂಥ ಪ್ರಾಧಿಕಾರವನ್ನು ಸರ್ಕಾರವು ಆ ಬಗ್ಗೆ ಹೊರಡಿಸಲಾದ ಆದೇಶದ ಮೂಲಕ ಗೊತ್ತುಪಡಿಸತಕ್ಕದ್ದು.

ಈ ನಿಯಮಗಳ ವಿವಿಧ ಉಪಬಂಧಗಳ ಉದ್ದೇಶಕ್ಕಾಗಿ ವಿವಿಧ ಪ್ರಾಧಿಕಾರಿಗಳನ್ನು ನಿರ್ದಿಷ್ಟಪಡಿಸಬಹುದು.

(2) ಈ ನಿಯಮಗಳಲ್ಲಿ ಬಳಸಿದ ಆದರೆ ಪರಿಭಾಷಿಸಿರದ ಇನ್ನಿತರ ಎಲ್ಲಾ ಪದಗಳು ಮತ್ತು ಪದಾವಳಿಗಳು, ಕರ್ನಾಟಕ ನಾಗರಿಕ ಸೇವಾ ನಿಯಮಗಳಲ್ಲಿ ಅಥವಾ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14) ಅಡಿಯಲ್ಲಿ ರಚಿಸಲಾದ ಅಥವಾ ರಚಿಸಲಾಗಿದೆಯೆಂದು ಭಾವಿಸಲಾದ ಯಾವುದೇ ಇತರ ನಿಯಮಗಳಲ್ಲಿ ಅವುಗಳಿಗೆ ನೀಡಲಾದ ಅರ್ಥವನ್ನೇ ಇವುಗಳಿಗೂ ನೀಡಲಾಗಿದೆ ಎಂದು ಭಾವಿಸತಕ್ಕದ್ದು.

3. ಸಾಮಾನ್ಯ ತತ್ತ್ವಗಳು.

(1) ಪ್ರತಿಯೊಬ್ಬ ಸರ್ಕಾರಿ ನೌಕರನು, ಎಲ್ಲ ಕಾಲಗಳಲ್ಲಿಯೂ, –

(i) ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು,

(ii) ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು

(iii) ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡತಕ್ಕದ್ದಲ್ಲ: ಮತ್ತು

(iv) ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗತಕ್ಕದ್ದಲ್ಲ.

(2) ಪ್ರತಿಯೊಬ್ಬ ಸರ್ಕಾರಿ ನೌಕರನು,-

(i) ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು:

(ii) ರಾಜಕೀಯವಾಗಿ ತಟಸ್ಥನಾಗಿರತಕ್ಕದ್ದು:

(iii) ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ, ಅರ್ಹತಾದಾಯಕ, ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತತೆಯ ಮೂಲ ತತ್ತ್ವಗಳನ್ನು ಅಳವಡಿಸಿಕೊಂಡಿರತಕ್ಕದ್ದು;

(iv) ಉತ್ತರದಾಯಿತ್ಯ ಮತ್ತು ಪಾರದರ್ಶಕತೆಯನ್ನು ನಿರ್ವಹಿಸತಕ್ಕದ್ದು

(v) ಸಾರ್ವಜನಿಕರಿಗೆ ಸ್ಪಂದನಾಶೀಲನಾಗಿರತಕ್ಕದ್ದು ಹಾಗೂ

(vi) ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ವಿನಯದಿಂದ ವರ್ತಿಸತಕ್ಕದ್ದು.

(3) ಮೇಲ್ವಿಚಾರಣಾ ಹುದ್ದೆಯನ್ನು ಹೊಂದಿರುವ ಪ್ರತಿಯೊಬ್ಬ ಸರ್ಕಾರಿ ನೌಕರನು, ತತ್ಕಾಲದಲ್ಲಿ ತನ್ನ ನಿಯಂತ್ರಣಕ್ಕೆ ಮತ್ತು ಅಧಿಕಾರಕ್ಕೆ ಒಳಪಟ್ಟಿರುವ ಎಲ್ಲಾ ಸರ್ಕಾರಿ ನೌಕರರ ನೀತಿ ನಿಷ್ಠೆಯನ್ನು ಮತ್ತು ಕರ್ತವ್ಯ ಶ್ರದ್ಧೆಯನ್ನು ಸುನಿಶ್ಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.

(4) ಪ್ರತಿಯೊಬ್ಬ ಸರ್ಕಾರಿ ನೌಕರನು, ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಸೌಜನ್ಯಯುತವಾದ ವರ್ತನೆಯನ್ನು ಹೊಂದಿರತಕ್ಕದ್ದು.

(5) ಪ್ರತಿಯೊಬ್ಬ ಸರ್ಕಾರಿ ನೌಕರನು,-

(i) ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಸರ್ವೋಚ್ಛತೆಗೆ ಸ್ವತಃ ಬದ್ಧನಾಗಿರತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು

(ii) ಭಾರತದ ಸಾರ್ವಭೌಮತ್ರ್ಯ ಮತ್ತು ಅಖಂಡತೆ, ರಾಷ್ಟ್ರದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಯನ್ನು ಸಮರ್ಥಿಸತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು;

(iii) ಸಾರ್ವಜನಿಕ ಹಿತದೃಷ್ಟಿಯಿಂದ ಮಾತ್ರವೇ ನಿರ್ಧಾರಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಥವಾಗಿ, ಪರಿಣಾಮಕಾರಿಯಾಗಿ ಮತ್ತು ಮಿತವ್ಯಯಕರವಾಗಿ ಬಳಸತಕ್ಕದ್ದು ಅಥವಾ ಬಳಸುವಂತೆ ಮಾಡತಕ್ಕದ್ದು.

State government employees should note: Here are the 'mandatory service rules' that you need to follow ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ `ಆಪರೇಷನ್ ಸಿಂಧೂರ್’ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಯುವಕ ಅರೆಸ್ಟ್.!

14/05/2025 7:37 AM1 Min Read

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

14/05/2025 7:12 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಗ್ಯಾಂಗ್ ರೇಪ್.!

14/05/2025 7:11 AM1 Min Read
Recent News

BREAKING : ಭಾರತಿ ಸಿಮೆಂಟ್ಸ್ ನಿರ್ದೇಶಕ `ಗೋವಿಂದಪ್ಪ ಬಾಲಾಜಿ’ ಅರೆಸ್ಟ್ |Govindappa Balaji arrested

14/05/2025 7:45 AM

ಹಿರಿಯ ವಕೀಲರ ಹುದ್ದೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್ | senior advocate designations

14/05/2025 7:43 AM

BR Gavai: ಇಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಬಿಆರ್ ಗವಾಯಿ ಪ್ರಮಾಣ ವಚನ

14/05/2025 7:37 AM

BREAKING: ಬೆಂಗಳೂರಲ್ಲಿ `ಆಪರೇಷನ್ ಸಿಂಧೂರ್’ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಯುವಕ ಅರೆಸ್ಟ್.!

14/05/2025 7:37 AM
State News
KARNATAKA

BREAKING: ಬೆಂಗಳೂರಲ್ಲಿ `ಆಪರೇಷನ್ ಸಿಂಧೂರ್’ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಯುವಕ ಅರೆಸ್ಟ್.!

By kannadanewsnow5714/05/2025 7:37 AM KARNATAKA 1 Min Read

ಬೆಂಗಳೂರು: ಆಪರೇಷನ್ ಸಿಂಧೂರ್’ ಸಕ್ಸಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಯುವಕನನ್ನು ಬಂಧಿಸಲಾಗಿದೆ. ಛತ್ತೀಸ್ಗಢ…

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

14/05/2025 7:12 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಗ್ಯಾಂಗ್ ರೇಪ್.!

14/05/2025 7:11 AM

ಆನೆ ಸೆರೆ, ಪಳಗಿಸುವುದರಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿ : ಸಚಿವ ಈಶ್ವರ ಖಂಡ್ರೆ

14/05/2025 6:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.