ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಯನ್ನು ಅಕ್ಟೋಬರ್ 01, 2025 ರಿಂದ ಜಾರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ [KASS] ಅನುಕೂಲಗಳು
ಸರ್ಕಾರಿ ಮಹಿಳಾ ನೌಕರರ ತಂದೆ ತಾಯಿಗಳು ಕೆಎಎಸ್ಎಸ್ ಸೌಲಭ್ಯ ಪಡೆಯಬಹುದು
ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಆದಾಯ ಮಿತಿಯನ್ನು 5. 17,000/- 2 5. 27,000₫ ជម្ពូជដ.
ಸುಮಾರು 2000 ಕಾಯಿಲೆಗಳಿಗೆ ಈ ಯೋಜನೆಯಡಿಯಲ್ಲಿ ಚಿಕಿತ್ಸೆ ಸೌಲಭ್ಯವಿದೆ.
ಸಿ & ಡಿ ವೃಂದದ ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯೆಯನ್ನು ಮುಂದುವರೆಸಲಾಗುವುದು.
ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಯಾರಾದರೂ ಒಬ್ಬರು ಮಾತ್ರ ಈ ಯೋಜನೆಗೆ ಮಾಸಿಕ ವಂತಿಕೆ ಪಾವತಿಸುವುದು.









