ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಮುಂಬಡ್ತಿ ಹೊಂದಲು ಹುದ್ದೆಗೆ ಅಗತ್ಯವಾದ ತರಬೇತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಿಗೆ ಕಂಪ್ಯೂಟರ್, ತಂತ್ರಾಂಶ, ಸಾಫ್ಟ್ ಸ್ಕಿಲ್ಸ್ ಸೇರಿ ಹಲವು ತರಬೇತಿ ಅಗ ತ್ಯವಿರುತ್ತದೆ. ಈ ತರಬೇತಿ ಪಡೆಯದಿದ್ದರೆ ಮುಂಬ ಡ್ತಿಗೆ ಅವಕಾಶವಿಲ್ಲ ಎಂದು ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರದ ‘ಸಿ’ ವೃಂದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಕೇಂದ್ರ ನಾಗರಿಕ ಸೇವಾ ಅಧಿ ಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರಕಾರದ ಎಲ್ಲ ಅಧಿಕಾರಿ ವರ್ಗಕ್ಕೆ ತರಬೇತಿಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು#CabinetDecisions pic.twitter.com/9AMxSIVbc2
— DIPR Karnataka (@KarnatakaVarthe) September 18, 2025