ಬೆಂಗಳೂರು : ಸಾಮಾನ್ಯ ಭವಿಷ್ಯ ನಿಧಿ ಖಾತೆಗೆ ಚಂದಾದಾರರು ಪಾವತಿಸಬಹುದಾದ ವಂತಿಗೆಯನ್ನು ರೂ. 5 ಲಕ್ಷಗಳಿಗೆ ಮಿತಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು ರೂ.5.00 ಲಕ್ಷಗಳಿಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ.