ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಗಡುವನ್ನು ಸೆಪ್ಟೆಂಬರ್.15ರವರೆಗೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದೆ.
ಇಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿಎಸ್ ಎಂಬುವರು ಆದೇಶ ಹೊರಡಿಸಿದ್ದು, ಸರ್ಕಾರಿ ಅಧಿಸೂಚನೆ ಸಂಖ್ಯೆ. 2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಾಯಿಸಲಾದ ಎಲ್ಲಾ ವರ್ಗದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್ಎಸ್ಆರ್ಪಿ) ಅಂಟಿಸಲು ಕೊನೆಯ ದಿನಾಂಕ. ಟಿಡಿ 193 ಟಿಡಿಒ 2021, ದಿನಾಂಕ:17.08.2023, ದಿನಾಂಕ:16.11.2023 ಮತ್ತು ಅಧಿಸೂಚನೆ ಸಂಖ್ಯೆ: ಟಿಡಿ 193 ಟಿಡಿಒ 2021 / ಪಿ -1, ದಿನಾಂಕ: 16.02.2024 ಅನ್ನು ದಿನಾಂಕ:15.09.2024 ರವರೆಗೆ ವಿಸ್ತರಿಸಲಾಗಿದೆ. ಈ ಸದರಿ ಅಧಿಸೂಚನೆ ಸಂಖ್ಯೆಯಲ್ಲಿ ಬೇರೆ ಯಾವುದೇ ಬದಲಾವಣೆಗಳಿಲ್ಲ ಎಂದಿದ್ದಾರೆ.
ಇನ್ನೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಸೆಪ್ಟಂಬರ್ 15ರವರೆಗೆ ವಿಸ್ತರಿಸಲಾಗಿದೆ. ಮತ್ತೆ ವಿಸ್ತರಣೆ ಮಾಡೋದಿಲ್ಲ. ವಾಹನ ಸಾವರರು ಯಾರು ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಹಾಕಿಸಿಕೊಂಡಿಲ್ಲವೋ ತಪ್ಪದೇ ಹಾಕಿಸಿಕೊಳ್ಳುವಂತೆ ಸೂಚಿಸಿದ್ದಾರೆ.
BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024