ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಸಚಿವರು, ಲೋಕಸಭಾ ಸದಸ್ಯರು ಹಾಗೂ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರುಗಳಿಗೆ ಹೊಸ ವಾಹನ ( New Vehicle ) ಖರೀದಿಸೋದಕ್ಕೆ ನಿಗದಿ ಪಡಿಸಲಾಗಿದ್ದಂತ ಮಿತಿಯನ್ನು ಹೆಚ್ಚಳ ಮಾಡಿದೆ.
ಎಫ್ಐಆರ್ ರದ್ದುಗೊಳಿಸುವಂತೆ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾ
ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಚಿವರುಗಳಿಗೆ, ಸಂಸದರಿಗೆ ಹೊಸ ವಾಹನ ಖರೀದಸಲು ಆರ್ಥಿಕ ಮಿತಿಯನ್ನು ಗರಿಷ್ಠ 23 ಲಕ್ಷ ನಿಗದಿ ಪಡಿಸಲಾಗಿತ್ತು. ಈ ಮಿತಿಯನ್ನು ರೂ.23 ಲಕ್ಷದಿಂದ ರೂ.26 ಲಕ್ಷ ( Ex-Show Room Rate Inclusive of GST ) ಗಳಿಗೆ ಹೊಸ ವಾಹನ ಖರೀದಿಸಲು ಇರುವ ಆರ್ಥಿಕ ಮಿತಿಯನ್ನು ಸರ್ಕಾರಿ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆ ಸಹಮತಿಸಿರುತ್ತದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಇನ್ಮುಂದೆ ಸಚಿವರು, ಲೋಕಸಭಾ ಸದಸ್ಯರುಗಳು ಉಪಯೋಗಕ್ಕಾಗಿ ವಾಹನ ಖರೀದಿಸಲು ನಿಗದಿ ಪಡಿಸಿದ ಆರ್ಥಿಕ ಮಿತಿಯನ್ನು ರೂ.23 ಲಕ್ಷಗಳಿಂದ ರೂ.26 ಲಕ್ಷಗಳಿಗೆ ಪರಿಷ್ಕರಿಸಿ, ನಿಗದಿ ಪಡಿಸಲಾಗಿದೆ ಎಂದಿದ್ದಾರೆ.
BIGG NEWS : ʻ ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ : ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ
ಇನ್ನೂ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ( ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಗಳಾಗಿದ್ದಲ್ಲಿ ) ಇವರುಗಳಿಗೆ ರೂ.20 ಲಕ್ಷಗಳ ಮಿತಿಯೊಳಗೆ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರುಗಳಿಗೆ ರೂ.18 ಲಕ್ಷಗಳು ಮತ್ತು ಇತರೆ ಜಿಲ್ಲಾ ಹಂತದ ಅಧಿಕಾರಿಗಳು, ಉಪವಿಭಾಧಿಕಾರಿಗಳು, ಪೊಲೀಸ್ ಉಪಾಧೀಕ್ಷಕರುಗಳಿಗೆ ರೂ.12.50 ಲಕ್ಷಗಳು ಹಾಗೂ ತಹಶೀಲ್ದಾರರುಗಳು ಮತ್ತು ಇತರೆ ಅರ್ಹ ತಾಲೂಕು ಮಟ್ಟದ ಅಧಿಕಾರಿಗಳಿಗೆ ರೂ.9 ಲಕ್ಷಗಳ ಮಿತಿಯನ್ನು ಸರ್ಕಾರಿ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆಯು ಸಹಮಿತಿಸಿರುತ್ತದೆ ಎಂದು ಹೇಳಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ