ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) 2022-23ನೇ ಸಾಲಿನಲ್ಲಿ ಹೊಸದಾಗಿ 6,601 ಶಾಲಾ ಕೊಠಡಿಗಳನ್ನು ( School Building ) ನಿರ್ಮಾಣ ಮಾಡೋದಕ್ಕೆ ಅನುಮತಿ ನೀಡಿ ಆದೇಶಿಸಿದೆ.
Video: ದೆಹಲಿಯಲ್ಲಿ ಸಂಸದರಿಂದ ʻತ್ರಿವರ್ಣ ಯಾತ್ರೆʼ: ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುವಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6601 ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶಿಲಾಗಿರುತ್ತದೆ ಎಂದಿದ್ದಾರೆ.
ಈ ಆದೇಶದ ಅನ್ವಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 20 ಕೊಠಡಿಗಳಂತೆ 4,480 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದ್ದು, ಮುಂದುವರೆದು 88 ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಹೆಚ್ಚುವರಿ ಕೊಠಡಿಗಳಂತೆ ಒಟ್ಟು 880 ಕೊಠಡಿಗಳನ್ನು ಸಂಬಂಧಪಟ್ಟ ಶಾಸಕರುಗಳಿಂದ ಪಡೆದು, ಅನುಷ್ಠಾನಗೊಳಿಸುವಂತೆ ತಿಳಿಸಿದ್ದಾರೆ.
BIGG NEWS: ಅಕ್ಕಿಯಲ್ಲಿ ತಯಾರಿಸಿದ ಸಿದ್ದರಾಮಯ್ಯ ಅವರ ಮೂರ್ತಿ ಪ್ರದರ್ಶನ