ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಪಂದ್ಯ ನಡೆಸಲು ಕೆ ಎಸ್ ಸಿ ಎ ಗೆ ಅನುಮತಿಯನ್ನು ರಾಜ್ಯ ಗೃಹ ಇಲಾಖೆ ನೀಡಿದೆ.
ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ಅನುಮತಿಸಲಾಗಿದ್ದು, ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿ ಪಡಿಸಿರುವ ನಿರ್ಧಿಷ್ಟ ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ.
ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಾವಳಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸೋದಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಬಗ್ಗೆ ಜನವರಿ.20ರ ಒಳಗಾಗಿ ಮಾಹಿತಿ ನೀಡುವಂತೆ ಕೆ ಎಸ್ ಸಿ ಎ ಗೆ ಬಿಸಿಸಿಐ ಸೂಚಿಸಿತ್ತು.








