Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೇ ನಿಧನ : ಪ್ರಧಾನಿ ಮೋದಿ ಸಂತಾಪ

12/04/2026 2:43 PM

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

12/04/2026 2:31 PM

ನೈಸರ್ಗಿಕವಾಗಿ ಚರ್ಮದ ಹೊಳಪು ಹೆಚ್ಚಿಸಲು ‘ಗೆಣಸು’ ರಾಮಬಾಣ: ಸಂಶೋಧನೆ ಏನು ಹೇಳುತ್ತದೆ?

12/04/2026 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ ಮಾಡಿದೆ: ಬಿವೈ ವಿಜಯೇಂದ್ರ
KARNATAKA

ರಾಜ್ಯ ಸರ್ಕಾರದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ ಮಾಡಿದೆ: ಬಿವೈ ವಿಜಯೇಂದ್ರ

By kannadanewsnow0922/01/2026 5:14 PM

ಬೆಂಗಳೂರು: ಈ ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನಾಡಿನ ಏಳಿಗೆಗೆ, ನಾಡಿನ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ಆಗಲು ವೇದಿಕೆ ಆಗಬೇಕೇ ವಿನಾ ಇವರ ರಾಜಕೀಯ ದ್ವೇಷಕ್ಕಾಗಿ ರಾಜ್ಯವನ್ನು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಷಡ್ಯಂತ್ರ-ಕುತಂತ್ರಕ್ಕೆ ಸದನವನ್ನು ಬಳಸುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದರು.

ಗೌರವಾನ್ವಿತ ರಾಜ್ಯಪಾಲರು ಸಂವಿಧಾನಬದ್ಧವಾಗಿ ಇರುವ ಅವರ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದಾರೆ. ಆದರೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದ ಹೊರಗಡೆಯೂ ನೀವು ಅಪಮಾನ ಮಾಡುತ್ತೀರಿ. ಜಂಟಿ ಸದನವನ್ನುದ್ದೇಶಿಸಿ ಮಾತನಾಡಿ ತೆರಳುವ ಸಂದರ್ಭದಲ್ಲಿ ಅವರಿಗೆ ಸದನದ ಒಳಗಡೆಯೂ ತಡೆ ಒಡ್ಡಲಾಗಿದೆ; ಅವರ ಮೇಲೆ ದಬ್ಬಾಳಿಕೆ ಮಾಡಲಾಗಿದೆ. ಇದು ಶೋಭೆ ತರುವ ವಿಚಾರವಲ್ಲ ಎಂದು ಹೇಳಿದರು.

ನಿನ್ನೆ ನಾನು ಮಾನ್ಯ ಕಾನೂನು ಸಚಿವ ಎಚ್.ಕೆ.ಪಾಟೀಲರ ಮಾತುಗಳನ್ನೂ ಗಮನಿಸಿದ್ದೇನೆ. ಮಾನ್ಯ ರಾಜ್ಯಪಾಲರ ಜೊತೆ ಆದ ಮಾತುಕತೆಯನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬೇಕಿತ್ತು. ಹೊರಗಡೆ ಬಂದು ರಾಜ್ಯಪಾಲರು ಸದನ ಬಹಿಷ್ಕರಿಸುತ್ತಾರೆಂಬ ಧಾಟಿಯಲ್ಲಿ ಕಾನೂನು ಸಚಿವರೇ ಮಾತನಾಡುವುದಾದರೆ, ಸಂವಿಧಾನಕ್ಕೆ ಇವತ್ತು ರಾಜ್ಯದ ಕಾಂಗ್ರೆಸ್ ಸರಕಾರ ಅಪಚಾರ ಮಾಡುತ್ತಿದೆ. ಸಿದ್ದರಾಮಯ್ಯನವರ ಸರಕಾರ ಈ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ಮಾನ್ಯ ರಾಜ್ಯಪಾಲರಿಗೆ ಅಪಮಾನ ಮಾಡಿದ್ದನ್ನು ಬಿಜೆಪಿ ಖಂಡಿಸುತ್ತದೆ. ಸಿದ್ದರಾಮಯ್ಯನವರು ಈ ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮತ್ತೆ ಮತ್ತೆ ನೆನಪಿಸಲು ಬಯಸುವುದಾಗಿ ಹೇಳಿದರು. ಇವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಲ್ಲ; ರಾಜ್ಯದ ಮುಖ್ಯಮಂತ್ರಿಗಳು; ಅದಕ್ಕೆ ತಕ್ಕಂತೆ ಅವರ ನಡವಳಿಕೆಯೂ ಇರಬೇಕಿತ್ತು ಎಂದು ಹೇಳಿದರು.

ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಮಾನ್ಯ ರಾಜ್ಯಪಾಲರು ಅವರ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಹಿಂದೆ ಯಾವ್ಯಾವ ರಾಜ್ಯಪಾಲರು ನಮ್ಮ ಬಿಜೆಪಿ ಸರಕಾರ ಇದ್ದಾಗ ಅಥವಾ ಇತರ ಸರಕಾರ ಇದ್ದಾಗ ಸದನದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ; ಎಲ್ಲವೂ ಕೂಡ ಇದೆ. ಅವರು ಮೂಗಿನ ನೇರಕ್ಕೆ ಮಾತನಾಡಲು ಸಾಧ್ಯವಾಗುವುದಿಲ್ಲ. ಒಟ್ಟಾರೆಯಾಗಿ ಇವತ್ತು ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ವಿರುದ್ಧ ಕೆಂಡ ಕಾರುತ್ತಿದೆ. ಈ ಧೋರಣೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ವ್ಯವಸ್ಥೆಗೆ ಪೂರಕವಾಗಿ ನಡೆದುಕೊಳ್ಳಬೇಕೇ ವಿನಾ, ಇವರ ಲೋಪ, ದೋಷಗಳನ್ನು ಮುಚ್ಚಿ ಹಾಕಿಕೊಳ್ಳಲು ಕೇಂದ್ರ ಸರಕಾರದ ವಿರುದ್ಧ ಪದೇಪದೇ ಸವಾರಿ ಮಾಡುವುದು ರಾಜ್ಯದ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದು ನುಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

12/04/2026 2:31 PM1 Min Read

BREAKING: KPCC ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ, ಡಿಸಿಎಂ ಡಿಕೆ ಶಿವಕುಮಾರ್ ಅಂಗೀಕಾರ

12/04/2026 2:21 PM1 Min Read

ಶಿವಮೊಗ್ಗದಲ್ಲಿ ಪಶುವೈದ್ಯೆ ಕಚ್ಚಿ ಕೊಂದ ನೀರಾನೆ ಮರಿ ಗರ್ಭದಲ್ಲೇ ಸಾವು, ತಾಯಿಯ ಸ್ಥಿತಿ ಗಂಭೀರ

12/04/2026 2:09 PM1 Min Read
Recent News

BREAKING : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೇ ನಿಧನ : ಪ್ರಧಾನಿ ಮೋದಿ ಸಂತಾಪ

12/04/2026 2:43 PM

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

12/04/2026 2:31 PM

ನೈಸರ್ಗಿಕವಾಗಿ ಚರ್ಮದ ಹೊಳಪು ಹೆಚ್ಚಿಸಲು ‘ಗೆಣಸು’ ರಾಮಬಾಣ: ಸಂಶೋಧನೆ ಏನು ಹೇಳುತ್ತದೆ?

12/04/2026 2:27 PM

BREAKING: KPCC ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ, ಡಿಸಿಎಂ ಡಿಕೆ ಶಿವಕುಮಾರ್ ಅಂಗೀಕಾರ

12/04/2026 2:21 PM
State News
KARNATAKA

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

By kannadanewsnow0912/04/2026 2:31 PM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಹಲವರು…

BREAKING: KPCC ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ, ಡಿಸಿಎಂ ಡಿಕೆ ಶಿವಕುಮಾರ್ ಅಂಗೀಕಾರ

12/04/2026 2:21 PM

ಶಿವಮೊಗ್ಗದಲ್ಲಿ ಪಶುವೈದ್ಯೆ ಕಚ್ಚಿ ಕೊಂದ ನೀರಾನೆ ಮರಿ ಗರ್ಭದಲ್ಲೇ ಸಾವು, ತಾಯಿಯ ಸ್ಥಿತಿ ಗಂಭೀರ

12/04/2026 2:09 PM

ಬೆಂಗಳೂರಲ್ಲಿ ಯುವತಿಯ ಅಪಹರಣ ಯತ್ನದಲ್ಲಿ ಚಾಕು ಇರಿತ ಪ್ರಕರಣ : ಚಿಕಿತ್ಸೆ ಫಲಿಸದೇ ಮಹಿಳೆ ಸಾವು!

12/04/2026 2:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.