ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ 11 ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್ 30, 2025 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನೆ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಮತ್ತು ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಯೋಜನೆಗಳು ಸೌಲಭ್ಯವನ್ನು ಪಡೆಯಬಹುದು.
ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/…/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು (ದಕ್ಷಿಣ ವಲಯ ನಂ-8861328076, ಉತ್ತರ ವಲಯ ನಂ-7411520526. ಪೂರ್ವ ವಲಯ 9590676975, ಯಲಹಂಕ ನಂ 9590676975, ಆನೇಕಲ್ ನಂ 8748903812) ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.