ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿಯ ಮಳಿಗೆಗಳು ಮತ್ತು ಆಸ್ತಿಗಳ ಗುತ್ತಿಗೆ ನಿಯಮಗಳ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ಬಿಬಿಎಂಪಿಯ ಮಳಿಗೆ, ಆಸ್ತಿಗಳ ಗುತ್ತಿಗೆ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ, 53) ರ 316 ರ ಪ್ರಕರಣಗಳೊಂದಿಗೆ ಓದಿಕೊಂಡು, 66, 67 ಮತ್ತು 130 ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ರಚಿಸಲು ಉದ್ದೇಶಿಸಿರುವ 316 ರ ಪ್ರಕರಣದ ಉಪ ಪ್ರಕರಣ (1) ರ ಕರಡನ್ನು ಸರ್ಕಾರದ ಅನುಮೋದನೆ ಪಡೆದು ಇದರಿಂದ ಭಾದಿತರಾಗುವ ಸಂಭವವಿರುವ ಎಲ್ಲ ವ್ಯಕ್ತಿಗಳ ಮಾಹಿತಿಗಾಗಿ, ಸದರಿ ಅಧಿನಿಯಮದ 316 ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅದನ್ನು ಅಧಿಕೃತ ರಾಜ್ಯಪತ್ರದಲ್ಲಿ ದಿನಾಂಕ: 20-07-2024ರಂದು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ತರುವಾಯ, ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಈ ಮೂಲಕ ಸೂಚಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮೇಲೆ ನಿರ್ದಿಷ್ಟಪಡಿಸಲಾದ ಅವಧಿಯ ಮುಕ್ತಾಯಕ್ಕೆ ಮುಂಚೆ ಸದರಿ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ, ಯಾರೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ, ವಿಕಾಸಸೌಧ, ಬೆಂಗಳೂರು – 560001 ಇವರಿಗೆ ಕಳುಹಿಸಬಹುದು.
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana