ಬೆಂಗಳೂರು: ಕೋವಿಡ್-19ರ ( Covid19 ) ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ ( Omicron ) ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ ( Deepavali Festival ) ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ( Kannada Rajyotsava ) ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ( Karnataka Government ) ಪ್ರಕಟಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.
ಹೀಗೆವೆ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಕ್ರಮಗಳು
- ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದೆ.
- ಕೋವಿಡ್ ಪರೀಕ್ಷೆಗೆ ಒಳಗಾದವರು ಕಡ್ಡಾಯವಾಗಿ ಪ್ರತ್ಯೇಕವಾಗಿ ಮನೆಯಲ್ಲಿ ಸ್ವಯಂ ಪ್ರೇರಿತವಾಗಿ ಇರುವಂತೆ ಸೂಚಿಸಿದೆ.
- ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಗೆ ತೆರಳಿ, ವೈದ್ಯಕೀಯ ಆರೈಕೆಯನ್ನು ಪಡೆಯುವಂತೆ ತಿಳಿಸಿದೆ.
- ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ ಬೆಳಕಿಲ್ಲದಿರುವ ಸ್ಥಳಗಳು, ಮುಚ್ಚಿದ ಸಂರಕ್ಷಣೆಯ ಜನಸಂದಣಿಯ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.
- ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣದಲ್ಲಿ ಆಚರಿಸುವುದು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವಂತೆ ತಿಳಿಸಿದೆ.
- ಕೋವಿಡ್19 ಲಸಿಕೆಯ ಬೂಸ್ಟರ್, ಮುಂಜಾಗ್ರತಾ ಡೋಸ್ ಲಸಿಕೆ ಬಾಕಿ ಇರುವವರು ಕೂಡಲೇ ಬಡೆಯುವಂತೆ ತಿಳಿಸಿದೆ.
- ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಿದೆ.
- ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳುವುದಿರುವುದು, ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆಯವುದು.
- ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವಂತೆ ತಿಳಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
BREAKING NEWS ; “ತಕ್ಷಣ ದೇಶ ತೊರೆಯಿರಿ” ; ಉಕ್ರೇನ್’ನಲ್ಲಿ ನೆಲೆಸಿರೋ ಭಾರತೀಯರಿಗೆ ‘ರಾಯಭಾರ ಕಚೇರಿ’ ಹೊಸ ಸಲಹೆ
‘WhatsApp’ ಬಳಕೆದಾರರಿಗೆ ಗುಡ್ ನ್ಯೂಸ್ ; ‘ಫೋಟೋ’ ಕಳುಹಿಸೋ ಮೊದ್ಲು ಸೂಕ್ಷ್ಮ ಮಾಹಿತಿ ‘Blur’ ಮಾಡಲು ಅವಕಾಶ
HEALTH TIPS: ‘ಮೊಟ್ಟೆ’ ಜೊತೆ ಯಾವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದು? ಇಲ್ಲಿದೆ ಅಗತ್ಯ ಮಾಹಿತಿ