ಬೆಂಗಳೂರು: ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿನ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ 2024-25ನೇ ಸಾಲಿನಿಂದ ಜಾರಿಗೆ ಬರುವಂತೆ ಪದವಿ ಕಾರ್ಯಕ್ರಮಗಳ ಅವಧಿ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಿ ಆದೇಶಿಸಿದೆ.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಕೆ. ವಿಕೇಶ್ ಬಾಬು ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 07.08.2021ರ ಆದೇಶದಲ್ಲಿ ಭಾರತ ಸರ್ಕಾರವು ಪಕಟಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿರುತ್ತದೆ ಎಂದಿದ್ದಾರೆ.

ದಿನಾಂಕ: 11.10.2023ರ ಆದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ಶ್ರೇಷ್ಠ ಶಿಕ್ಷಣ ತಜ್ಞರಾದ Prof. Sukhdev Torat, ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ದಿನಾಂಕ: 18.01.2024ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಸಂಪೂರ್ಣವಾಗಿ ಒಪ್ಪಲು ಶಿಫಾರಸ್ಸು ಮಾಡಿರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ದಿನಾಂಕ: 19.01.2024ರಂದು REPORT PART-1 ಮತ್ತು ದಿನಾಂಕ: 10.03.2024ರಂದು ನ್ನ REPORT PART-1(a) ಮಧ್ಯಂತರ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿರುತ್ತದೆ ಎಂದಿದ್ದಾರೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿನ ಶಿಫಾರಸ್ಸುಗಳನ್ನು 2024-25 ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಅನುಷ್ಠಾನಗೊಳಿಸಲು ದಿನಾಂಕ: 02.04.2024ರಂದು ಚುನಾವಣಾ ಆಯೋಗದ ಅನುಮತಿಯನ್ನು ಪಡೆಯಲಾಗಿರುತ್ತದೆ ಎಂದಿದ್ದಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಗಳಲ್ಲಿನ ಶಿಫಾರಸ್ಸುಗಳನ್ನು 2024-25 ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿ, ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ 1) ಬೆಂಗಳೂರು, ದಿನಾಂಕ:07.08.2021ರ ಆದೇಶವನ್ನು ಪರಿಷ್ಕರಿಸಲು ಸರ್ಕಾರವು ನಿರ್ಧರಿಸಿ, ಅದರಂತೆ ಈ ಕೆಳಕಂಡ ಆದೇಶ ಎಂದು ತಿಳಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳನ್ವಯ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕಾರ್ಯಕ್ರಮಗಳಿಗೆ 2024-25ನೇ ಶೈಕ್ಷಣಿಕ ವರ್ಷದಿಂದ ಅನುಬಂಧ-1 ಮತ್ತು ಅನುಬಂಧ-2 ರ ಮಾರ್ಗಸೂಚಿಗಳಿಗನುಸಾರವಾಗಿ ಪದವಿ ಕಾರ್ಯಕ್ರಮಗಳ ಅವಧಿ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಿ ಆದೇಶಿಸಿದ್ದಾರೆ.

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ : ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ | Karnataka SSLC Exam results 2024

ಕಾಂಗ್ರೆಸ್ ನ ‘ಗ್ಯಾರಂಟಿ ಯೋಜನೆಗಳೇ’ ನನ್ನ ಕೈ ಹಿಡಿಯುತ್ತವೆ : ಗೀತಾ ಶಿವರಾಜ್ ಕುಮಾರ ವಿಶ್ವಾಸ

Share.
Exit mobile version