ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನವಾಗಿ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಹೀಗೆ ಆದೇಶ ಹೊರಡಿಸಿರುವಂತ ಪಟ್ಟಿಯಲ್ಲಿ ಸತ್ತವರಿಗೂ ಸದಸ್ಯರನ್ನಾಗಿ ನೇಮಕ ಮಾಡಿ ಮಹಾ ಎಡವಟ್ಟು ಮಾಡಿದೆ.
BREAKING NEWS: ಏಷ್ಯಾಕಪ್ 2022ಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ | VVS Laxman
ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವಂತ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶಿಸಿತ್ತು. ಹೀಗೆ ನೇಮಕ ಮಾಡಿರುವಂತ ಚಿಕ್ಕಮಗಳೂರಿನ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಸದಸ್ಯರ ಪಟ್ಟಿಯಲ್ಲಿ, ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರನ್ನು ನೇಮಕ ಮಾಡಲಾಗಿದೆ.
BREAKING NEWS: ‘ಕಾಂಗ್ರೆಸ್ ಪಕ್ಷ’ದ ‘ಯೂಟ್ಯೂಬ್ ಚಾನೆಲ್’ ಡಿಲೀಟ್ | Congress YouTube channel deleted
ಅಂದಹಾಗೇ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ಇಂದು ನೇಮಕ ಮಾಡಿರುವಂತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಯವರು, ಲೇಖಕ ಕೆಪಿ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ. ಅವರು 2021ರ ಡಿಸೆಂಬರ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಅವರನ್ನು ಕೆಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಿ, ಮಹಾ ಎಡವಟ್ಟು ಮಾಡಿದೆ.