ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ ಹಾಗೂ ನೌಕರರ ಗಮನಕ್ಕೆ ಎನ್ನುವಂತೆ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2024 ಮತ್ತು 2025ನೇ ಸಾಲಿನ ಎರಡು ವರ್ಷಗಳ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ತಮ್ಮ ನಾಮನಿರ್ದೇಶನಗಳನ್ನು ದಿನಾಂಕ 14-04-2025ರೊಳಗಾಗಿ ಆನ್ ಲೈನ್ ಮೂಲಕ ಸಲ್ಲಿಸಲು ಸರ್ಕಾರ ಕೋರಿದೆ.
ಅರ್ಜಿಯನ್ನು ಆನ್ ಲೈನ್ ಮೂಲಕ ಮಾತ್ರವೇ ಸಲ್ಲಿಸಬಹುದಾಗಿದೆ. Https://sarvothamaawards.karnataka.gov.in ಮೂಲಕ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಳಸಬಹುದಾಗಿದ್ದು, ಕನ್ನಡದಲ್ಲಿ ಸಲ್ಲಿಸಲು ನುಡಿ 6.0 ಆವೃತ್ತಿಯನ್ನು ಮಾತ್ರ ಬಳಸಬಹುದು. 2024 ಹಾಗೂ 2025ನೇ ಸಾಲಿನ ಪ್ರಶಸ್ತಿಗಳಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.
ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಆದೇಶವನ್ನು https://dparar.karnataka.gov.in ನಲ್ಲಿ ವೀಕ್ಷಿಸಿ ಪರಿಶೀಲಿಸಬಹುದಾಗಿದೆ.
BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ಮೇಲಿನ ಮಾರಾಟ ತೆರಿಗೆ ಶೇ.21.17ಕ್ಕೆ ಏರಿಸಿ ಸರ್ಕಾರ ಆದೇಶ
Good News: ದಕ್ಷಿಣ ಭಾರತದ ಅತಿ ದೊಡ್ಡ ‘ಅಂಗಾಂಗ ಮರು ಪಡೆಯುವ ಕೇಂದ್ರ’ ಬೆಂಗಳೂರಿನಲ್ಲಿ ಸ್ಥಾಪನೆ