ಬೆಂಗಳೂರು: ಇಂದು ಹೃದಯಾಘಾತದಿಂದ ನಿಧನರಾದಂತ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಸ್ವಗ್ರಾಮದಲ್ಲಿ ನಡೆಸಲಾಗುತ್ತಿದೆ. ಇಂತಹ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ರಾಜಾ ವೆಂಕಟಪ್ಪ ನಾಯಕ್ ಅವರು ಇಂದು ನಿಧನರಾಗಿರುತ್ತಾರೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದ್ದಂತ ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲು ಆದೇಶಿಸಿದ್ದಾರೆ.