ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 ರ ನಂತರ ನಿಧನ, ನಿವೃತ್ತಿ, ರಾಜಿನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ ನೀಡಲಾಗಿತ್ತು ಎಂದಿದ್ದಾರೆ.
ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಸೂಕ್ತ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವ ಹಾಗೂ ಇತರೆ ಕಾರಣಗಳಿಂದ ದಿನಾಂಕ:31.1.2.2012 ರವರೆಗೆ ಖಾಲಿಯಾದ ಹುದ್ದೆಗಳನ್ನು ಹೆಚ್ಚುವರಿ
ಪುಕ್ರಿಯೆಯಲ್ಲಿ ಬಳಸಿಕೊಂಡು ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು ಹಾಗೂ ದಿನಾಂಕ:01.01.2013 ರಿಂದ 31.12.2014 ರವರೆಗೆ ಹಾಗೂ 01.01.2015 ರಿಂದ 31.12.2015 ರವರೆಗೆ ಖಾಲಿಯಾದ ಬೋಧಕ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡ ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು (ವೃತ್ತಿ / ಚಿತ್ರಕಲಾ / ಸಂಗೀತ ಹಾಗೂ ಮುಂತಾದ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಭರ್ತಿ ಮಾಡುವ ಷರತ್ತಿಗೊಳಪಟ್ಟು ಆರ್ಥಿಕ ಮಿತ್ಯವ್ಯಯ ಸಡಿಲಿಸಿ ಅನುಮತಿ ನೀಡಲಾಗಿತ್ತು ಎಂದು ಹೇಳಿದ್ದಾರೆ.
ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.
ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಮತ್ತು ಧಾರವಾಡ ಹಾಗೂ ನಿರ್ದೇಶಕರು [ಪ್ರೌಢ], ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 1994-95 ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 0:31.12.2020 ರವರೆಗೆ ನಿವೃತ್ತಿ, ನಿಧನ,
DDDOT:01.01.2016 ರಿಂದ ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತಿಗಳಿಗೊಳಪಟ್ಟು ಭರ್ತಿ ಮಾಡಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ ಎಂದಿದ್ದಾರೆ.
ಷರತ್ತುಗಳು:
1. ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ: 09.04.2013 ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.
2. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳವುದು.
3. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಮರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು,
4. 2016-17 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು.
5. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.
6. ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು.
7. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ:ಇಡಿ 16 ಟಿಪಿಯು 2011, ದಿನಾಂಕ:30.09.2011 ಅನ್ನು ಹಿಂಪಡೆಯಲಾಗಿದ್ದು, ಹುದ್ದೆಗಳ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ : ಆಇ 880 ವೆಚ್ಚ-8/2022 ದಿನಾಂಕ: 31.07.2024 ಹಾಗೂ 06.08.2024ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಿದೆ ಎಂದು ಹೇಳಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ರಾಜ್ಯಾಧ್ಯಂತ ಡೆಂಗ್ಯೂ ಆರ್ಭಟ: ಇಂದು ‘279 ಕೇಸ್’ ದಾಖಲು, 20,202ಕ್ಕೆ ತಲುಪಿದ ಪ್ರಕರಣ | Dengue Case
BREAKING: ನನ್ನ ವಿರುದ್ಧದ ಆರೋಪ ಸಾಬೀತು ಪಡಿಸಿದ್ರೇ ‘ರಾಜಕೀಯ ನಿವೃತ್ತಿ’: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್
ಆ.22ರಿಂದ ಬೆಂಗಳೂರಲ್ಲಿ ಅತಿದೊಡ್ಡ ಕೃಷಿ ಮತ್ತು ಆಹಾರ ಪ್ರದರ್ಶನ ಮೇಳ | AgriTech India 2024