ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ಅಂಶ ಪತ್ತೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಖಡಕ್ ಆದೇಶ ಹೊರಡಿಸಿದೆ.
ಇಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀವಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರ ತಿರುಪತಿ ಲಡ್ಡು ಪ್ರಸಾದದ ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡಿದೆ. ಅಂತಹ ವಿವಾದಕ್ಕೆ ಕಾರಣವಾಗುವ ಮುನ್ನವೇ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಶುದ್ದ ನಂದಿನಿ ತುಪ್ಪ ಬಳಕೆಗೆ ಆದೇಶಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ನಾಗಮಂಗಲ ಗಲಭೆಗೆ ಪೊಲೀಸರ ಸಂಪೂರ್ಣ ವೈಫಲ್ಯವೇ ಕಾರಣ: ರಾಜಕೀಯ, ತುಷ್ಟೀಕರಣದಿಂದ ಗಲಭೆ
BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!
BREAKING : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ ಘೋಷಣೆ