ಬೆಂಗಳೂರು : 2024-25 ನೇ ಸಾಲಿನ ಆಯವ್ಯಯ ಕಂಡಿಕೆ-163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ, 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2024-25ನೇ ಸಾಲಿನ ಆಯವ್ಯಯದ ಕಂಡಿಕೆ-163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದೆಂದು ಘೋಷಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ರಾಜ್ಯದ 31 ಜಿಲ್ಲೆಗಳು, 231- ತಾಲ್ಲೂಕುಗಳಲ್ಲಿ 770 ಹೋಬಳಿಗಳ ಪೈಕಿ, ಪರಿಶಿಷ್ಟ ಜಾತಿ- 503, ಪರಿಶಿಷ್ಟ ವರ್ಗದ -144 ಹಾಗೂ ಹಿಂದುಳಿದ ವರ್ಗದ-174 ವಸತಿ ಶಾಲೆಗಳು ಒಟ್ಟಾರೆ 821 ವಸತಿ ಶಾಲೆ / ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರ ಮತ್ತು ಕಸಬಾ ಹೋಬಳಿಗಳನ್ನು ಹೊರತುಪಡಿಸಿ, ಒಟ್ಟು 114 ಹೋಬಳಿಗಳಲ್ಲಿ ವಸತಿ ಶಾಲೆಗಳು ಇರುವುದಿಲ್ಲ.
2024-25ನೇ ಸಾಲಿನ ಆಯವ್ಯಯದಲ್ಲಿ 20 ಹೋಬಳಿಗಳಲ್ಲಿ ಹೊಸ ಶಾಲೆಗಳನ್ನು ಮಂಜೂರು ಮಾಡಲು ಹಾಗೂ ಪ್ರತಿ ಶಾಲೆಗೆ 8 ರಿಂದ 10 ಎಕರೆ ಜಮೀನಿನ ಅವಶ್ಯಕತೆ ಇದ್ದು, 31 ಜಿಲ್ಲೆಗಳ ಪೈಕಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ವಸತಿ ಶಾಲೆಗಳಿಲ್ಲದ ಕಸಬಾ ಹೋಬಳಿಗಳನ್ನು ಹಾಗೂ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದೇ ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳು ಇದ್ದು, ಈ ಪೈಕಿ ಹಾಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 09 ಶಾಲೆಗಳನ್ನು ಸ್ಥಳಾಂತರಿಸಬಹುದಾಗಿರುತ್ತದೆ. ಈ ಶಾಲೆಗಳನ್ನು ಹೊರತುಪಡಿಸಿ, 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡುವಂತೆ ಕೋರಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರು ಏಕ ಕಡತದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
2024-25ನೇ ಸಾಲಿನ ಆಯವ್ಯಯದ ಇಲ್ಲದಿರುವ ໐໖-163 ರಲ್ಲಿ ವಸತಿ ಶಾಲೆಗಳು ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ 20 ವಸತಿ ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿರುವ ಪ್ರಸ್ತಾವನೆಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳು ಸಹಮತಿ ನೀಡಿರುವಂತೆ ಈ ಕೆಳಕಂಡಂತೆ ಆದೇಶಿಸಿದೆ.