ಬೆಂಗಳೂರು: ರಾಜ್ಯ ಸರ್ಕಾರದಿಂದ 2023ನೇ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ಇಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದಿದಂ ಬರ ನಿರ್ವಹಣೆಗಾಗಿ NDRF ಅನುದಾನವನ್ನು ನಿರೀಕ್ಷಿಸಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ 17-07-2023ರಲ್ಲಿ ಹೊರಡಿಸಿರುವ SDRF ಮಾರ್ಗಸೂಚಿಯನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ಇನ್ ಪುಡ್ ಸಬ್ಸಿಡಿಯನ್ನು ನಿಗದಿಪಡಿಸಲಾಗಿದೆ ಅಂತ ತಿಳಿಸಿದ್ದಾರೆ.
ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗಳಿಗೆ ರೂ.8,500, ನೀರಾವರಿ ಬೆಳೆಗೆ ರೂ.17,000 ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ ರೂ.22,500 ಪರಿಹಾರವನ್ನು ನಿಗದಿ ಮಾಡಿ, ಅದಕ್ಕಾಗಿ ರಾಜ್ಯ ಸರ್ಕಾರವು 105 ಕೋಟಿಯನ್ನು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಇವರಿಗೆ ಬಿಡುಗಡೆ ಮಾಡಿದೆ.
ಪ್ರತಿ ರೈತರಿಗೆ ಗರಿಷ್ಠ 2000ರವರೆಗೆ ರೈತರಿಗೆ ಪಾವತಿಸಲು 2023-24ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.
BREAKING: ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಇ-ಮೇಲ್ ಮೂಲಕ ‘ಬಾಂಬ್ ಬೆದರಿಕೆ’
ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut