ಬೆಂಗಳೂರು : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರರಡಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ಮೊರಾರ್ಜಿ ದೆಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್ ಅಂಬೇಡ್ಕರ್ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾಗಾಂಧಿ / ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ ” 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ಎಚ್‌ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು” ಗಳಿಗೆ ಶೇ 10% ಮೀಸಲಾತಿಯನ್ನು ನಿಗಧಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಸಕಇ399ಎಂಡಿಎಸ್2022, ಬೆಂಗಳೂರು ದಿನಾಂಕ:15.03.2024 ರಲ್ಲಿ ಆದೇಶ ಹೊರಡಿಸಿದ (ಪ್ರತಿ ಲಗತ್ತಿಸಿದೆ). ತಮ್ಮ ಜಿಲ್ಲೆಯ ವಿಕಲಚೇತನರು ಇದರ ಸದುಪಯೋಗ ಪಡಿಸಿಕೊಳ್ಳಲು ಸೂಚನೆ ನೀಡಿದೆ.