ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲೀಂ ಯುವಕನಿಂದ ನೇಹಾ ಹಿರೇಮಠ ಬರ್ಬರವಾಗಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಅಲ್ಲದೇ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸೋದಾಗಿ ತಿಳಿಸಿದ್ದರು. ಅದರಂತೆ ರಾಜ್ಯ ಸರ್ಕಾರ ನೇಹಾ ಹತ್ಯೆ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ಆದೇಶಿಸಿದೆ.
ಈ ಕುರಿತಂತೆ ಸಚಿವ ಹೆಚ್.ಕೆ ಪಾಟೀಲ್ ಅವರು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕುಮಾರಿ ನೇಹಾ ಹಿರೇಮಠ ಅವರ ಹೀನಾಯ ಹತ್ಯೆ ಪ್ರಕರಮದಲ್ಲಿ ಕರ್ನಾಟಕ ಸರ್ಕಾರವು ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ವರದಿಯ ಆಧಾರದ ಮೇಲೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿದ್ದೇನೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರವು ಉದ್ದೇಶಿಸಿದೆ. ಸರ್ವೋಚ್ಛ ನ್ಯಾಯಾಲಯವು ಮಹಿಳೆಯರ ವಿರುದ್ಧದ ಹೀನಾಯ ಅಪರಾಧ ಪ್ರಕರಣಗಳಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕೂಲಕುಂಷವಾಗಿ ಪರಿಶೀಲಿಸಿ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ದಂಡ ಸಂಹಿತೆಗೆ ಮಾಡಲಾಗಿರುವ ತಿದ್ದುಪಡಿಗಳನ್ನು ಸರ್ಕಾರವು ಗಂಭೀರವಾಗಿ ಗಮನಿಸಿದೆ ಎಂದಿದೆ.
ನೇಹಾ ಹಿರೇಮಠ ಪ್ರಕರಣವು ಸಾಮಾಜಿಕ ಮತ್ತು ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರುವಂತದ್ದಾಗಿದ್ದಾಗಿರುತ್ತದೆ. ಆದ ಕಾರಣ ಒಂದು ವಿಶೇಷ ನ್ಯಾಯಾಲಯದ ಅವಶ್ಯಕತೆಯನ್ನು ಸರ್ಕಾರವು ಮನಗಂಡಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಮಹಿಳೆಯ ವಿರುದ್ಧದ ಅಪರಾಧ ಕುರಿತು ವಿಶೇಷ ನ್ಯಾಯಾಲಯವೊಂದನ್ನು ಸ್ಥಾಪಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ- ಸಚಿವ ಪ್ರಿಯಾಂಕ್ ಖರ್ಗೆ
WATCH VIDEO: ಕುಡಿದ ಮತ್ತಿನಲ್ಲಿ ಮಗನನ್ನೇ ಟೆರೇಸ್‌ನಿಂದ ತಳ್ಳಿದ ಅಪ್ಪ, ವಿಡಿಯೋ ವೈರಲ್!