ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ.
ಸಮೀಕ್ಷೆಯು ಪೂರ್ಣಗೊಳ್ಳಲು ಹಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗೊಂಡು, ದಿನಾಂಕ: 26.09.2025 ರಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿರುವಂತೆ ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರೀಷ್ಕರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮವಹಿಸಲು ನಿರ್ಧರಿಸಲಾಯಿತು.
ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ, ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಧ್ಯವಾರ್ಷಿಕ ರಜಾ ದಿನಗಳ ನಂತರ ಶಾಲಾ ತರಗತಿಗಳು ಸಮೀಕ್ಷೆಯ ಕಾರಣದಿಂದ ಕುಂಠಿತವಾಗಬಾರದು ಎನ್ನುವ ದೃಷ್ಟಿಯಿಂದ ಈ ಕೆಳಗಿನ ಸೂಚನೆಗಳಂತೆ ಕಮವಹಿಸುವುದು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 24-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ಕೈಗೊಂಡು ದಿನಾಂಕ: 24-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.
ರಾಜ್ಯದ ಇತರೆ ಭಾಗಗಳಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು): ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು ಎಂದಿದೆ.
ವನ್ಯಜೀವಿಯಿಂದ ಹಾಡಿಯ ಜಾನುವಾರು ಮೃತಪಟ್ಟರೆ ಪರಿಹಾರ: ಸಚಿವ ಈಶ್ವರ ಖಂಡ್ರೆ